ವಿಟ್ಲ | ಬಸ್ ಢಿಕ್ಕಿ: ಯುವತಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿಯಾದ ಪರಿಣಾಮ ಓರ್ವ ಯುವತಿ ಗಂಭೀರ ಗಾಯಗೊಂಡು, ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ವಿಟ್ಲ-ಮಂಗಳೂರು ರಸ್ತೆಯ ಕೆಲಿಂಜದಲ್ಲಿ ಶನಿವಾರ ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ. ಇನ್ನುಳಿದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.







.jpeg)



