Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ: ಸಿಎಂಗೆ ಪತ್ರ ಬರೆದ 'ನೈಜ ಹೋರಾಟಗಾರರ ವೇದಿಕೆ'

11 Feb 2023 11:15 AM IST
share
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ: ಸಿಎಂಗೆ ಪತ್ರ ಬರೆದ ನೈಜ ಹೋರಾಟಗಾರರ ವೇದಿಕೆ

ಶಿವಮೊಗ್ಗ : ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು 'ನೈಜ ಹೋರಾಟಗಾರರ ವೇದಿಕೆ' ಆಗ್ರಹಿಸಿದೆ. 

ಈ ಸಂಬಂಧ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ  'ನೈಜ ಹೋರಾಟಗಾರರ ವೇದಿಕೆಯ  ಹೆಚ್. ಎಂ. ವೆಂಕಟೇಶ್, ಯಡಿಯೂರಪ್ಪನವರು ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನು ಇಡುವುದು ಬೇಡವೆಂದು ಹಲವಾರು ಬಾರಿ ಹೇಳಿದ್ದರೂ ಮತ್ತೆ ಪದೇ ಪದೇ ಅವರ ಹೆಸರನ್ನು ತಾವು (ಮುಖ್ಯಮಂತ್ರಿ) ಪ್ರಸ್ತಾಪಿಸುತ್ತಿರುವುದು ನ್ಯಾಯ ಸಮ್ಮತವಲ್ಲ ಮತ್ತು ಸಮಂಜಸವಲ್ಲ ಎಂದು ಹೇಳಿದ್ದಾರೆ. 

ಪತ್ರದ ಪೂರ್ಣ ಪಾಠ ಹೀಗಿದೆ...

''ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಗುರುತರ ಜವಾಬ್ದಾರಿಯುತಸ್ಥಾನದಲ್ಲಿರುವ ತಾವುಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ತಯಾರಿ ನಡೆಸುತ್ತಿರುವುದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ''

''ಆದರೆ ಮಾಜಿ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರು ನನ್ನ ಹೆಸರನ್ನು ಇಡುವುದು ಬೇಡವೆಂದು ಹಲವಾರು ಬಾರಿ ಹೇಳಿದ್ದಾರೆ.  ಅವರ ಮನಸ್ಸಿನ ಅಂತರಾಳದಲ್ಲಿ ಗೊತ್ತಿದೆ ನನ್ನ ಹೆಸರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡುವುದು ಸಮಂಜಸವಲ್ಲ ಮತ್ತು ಯೋಗ್ಯವಲ್ಲವೆಂದು. ನಿಜವಾಗಿಯೂ ಅವರು ಆತ್ಮ ಮತ್ತು  ಹೃದಯದ ಅಂತರಾಳದಿಂದ ನನ್ನ ಹೆಸರನ್ನು ಇಡುವುದು ಬೇಡವೆಂದು ಹೇಳಿರುವುದು ಸರಿಯಾಗಿ ಇದೆ''

''ಶ್ರೀಯುತ ಯಡಿಯೂರಪ್ಪನವರ ಮನವಿ ಸಮಂಜಸವಾಗಿದ್ದು ಅವರ ಹೆಸರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬೇಡವೆಂದ ಮೇಲೆ ಮತ್ತೆ ಪದೇ ಪದೇ ಅವರ ಹೆಸರನ್ನು ತಾವು ಪ್ರಸ್ತಾಪಿಸುತ್ತಿರುವುದು ನ್ಯಾಯ ಸಮ್ಮತವಲ್ಲ ಮತ್ತು ಸಮಂಜಸವಲ್ಲ''

''ಶಿವಮೊಗ್ಗ ಅತ್ಯಂತ ಪ್ರಗತಿಪರ ಚಿಂತಕರು,  ಸಾಮಾಜಿಕ ನೆಲೆಗಟ್ಟಿನಲ್ಲಿ,ಸಮಾಜವಾದದ ನೆಲಗಟ್ಟಿನಲ್ಲಿ ಸೌಹೃದಯರ ನಾಡಾಗಿದ್ದು ಇಲ್ಲಿ ಹುಟ್ಟಿ ಬೆಳೆದ  ರಾಜಕಾರಣಿಗಳು, ಕವಿಗಳು, ಸಾಹಿತಿಗಳು  ದೇಶದ ಗಮನವನ್ನೇ ಸೆಳೆದಿದ್ದಾರೆ''

''ಅದರಲ್ಲೂ ಮುಂಚೂಣಿಯಲ್ಲಿರುವ ಹೆಸರು ನಮ್ಮ ನಿಮ್ಮೆಲ್ಲರ ಹೃದಯದಲ್ಲಿ ಸ್ಥಾನ ಪಡೆದ ರಾಷ್ಟ್ರಕವಿ ಕುವೆಂಪು, ಕಡಿದಾಳ್ ಮಂಜಪ್ಪ ಶಾಂತವೇರಿ ಗೋಪಾಲಗೌಡ ಇಂತಹ  ವ್ಯಕ್ತಿಗಳು ಹುಟ್ಟಿ ಬೆಳೆದು ಈ ನಾಡಿಗೆ ಒಂದು ಒಳ್ಳೆಯ ಸಂದೇಶವನ್ನು ಕೊಟ್ಟು ಈ ನಾಡಿನ ಮಣ್ಣಿನಲ್ಲಿ, ಈ ಪ್ರಕೃತಿಯಲ್ಲಿ  ಲೀನರಾಗಿದ್ದರೆ. ಆದರೂ ಕೂಡ ಅವರ ಹೆಸರು ಅಜರಾಮರ ಮತ್ತು ಅವರು ಹಾಕಿಕೊಟ್ಟ ಮಾರ್ಗ ಅತ್ಯಂತ ಸರಳವಾಗಿದ್ದರೂ ಸಹ ಅದನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಲು ಇಂದಿನ ರಾಜಕಾರಣಿಗಳು ಮತ್ತು ಅದರಲ್ಲೂ ಯುವ ಪೀಳಿಗೆಯ ರಾಜಕಾರಣಿಗಳಿಗೆ ಸಾಧ್ಯವಾಗದಿರುವುದು ದುರಾದೃಷ್ಟಕರ ಸಂಗತಿ''

''ಇಂತಹವರ ಹೆಸರನ್ನು ಇನ್ನಷ್ಟು ಶಾಶ್ವತಗೊಳಿಸಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡುವಂತೆ ನೈಜ ಹೋರಾಟಗಾರರ ವೇದಿಕೆಯು ವಿನಯ ಪೂರ್ವಕವಾದ ಆಗ್ರಹವನ್ನು ಮಾಡುತ್ತಿದೆ''

''ನಿಮ್ಮ ರಾಜಕೀಯ ವರಸೆ, ಜಾತಿ, ಧರ್ಮ, ಮತಬ್ಯಾಂಕ್ ರಾಜಕೀಯ ಇವುಗಳನ್ನೆಲ್ಲ ಬದಿಗೆ ಸರಿಸಿ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣವಾದ ಈ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡುವಂತೆ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ. ಆದರೂ ಕೂಡ ಅವರ ಹೆಸರನ್ನು ಇಡಲು ನಿಮಗೆ ಇಚ್ಚಾ ಶಕ್ತಿ ಇಲ್ಲದಿದ್ದಲ್ಲಿ ಕೊನೆಯ ಪಕ್ಷ  ಕಡಿದಾಳ್ ಮಂಜಪ್ಪ, ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡುವಂತೆ ನಾವು ಸೂಚಿಸುತ್ತೇವೆ.''

''ಇವರೆಲ್ಲರ ಹೆಸರ ಹೊರತಾಗಿಯೂ ನೀವು ಬೇರೆ ಹೆಸರನ್ನು ಅಥವಾ ಯಡಿಯೂರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಟ್ಟಿದ್ದೆ ಆದಲ್ಲಿ ಕುವೆಂಪುರವರ ವಿಶ್ವಮಾನವ ಸಂದೇಶಕ್ಕೆ ಕಡಿದಾಳ್ ಮಂಜಪ್ಪ ನವರ ಪ್ರಾಮಾಣಿಕತೆಗೆ ಶಾಂತವೇರಿ ಗೋಪಾಲಗೌಡರ ಸಮಾಜವಾದಕ್ಕೆ ಧಕ್ಕೆ ತಂದಂತೆ ಎಂದು ನಾವು ಭಾವಿಸುತ್ತೇವೆ. ಹಾಗೂ ನಿಮ್ಮ ಪ್ರಾಮಾಣಿಕತೆ, ಪಾರದರ್ಶಕ  ಆಡಳಿತ, ಭ್ರಷ್ಟಾಚಾರ ರಹಿತಆಡಳಿತ, ಜಾತಿ ರಾಜಕಾರಣದ ಬಗ್ಗೆ ನಾವು ಪ್ರಶ್ನಿಸಬೇಕಾಗುತ್ತದೆ''

''ಈ ಎಲ್ಲಾ ಹಿನ್ನೆಲೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡುವ ಮೂಲಕ ಶಿವಮೊಗ್ಗ ಜಿಲ್ಲೆಯ ಜನರ ನಾಡಿಮಿಡಿತವನ್ನು ತಾವು ಅರಿತಿದ್ದೀರಿ ಎಂದು ಜನರ ಹೃದಯಕ್ಕೆ ಸ್ಪಂದಿಸುತ್ತಿದ್ದೀರಿ ಎಂದು ನಾವು ಭಾವಿಸುತ್ತೇವೆ'' ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

share
Next Story
X