ಬೆಂಗಳೂರು | ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪ; ಶಂಕಿತ ಎನ್‌ಐಎ ವಶಕ್ಕೆ

ಬೆಂಗಳೂರು: ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪದಡಿ ಆರೀಫ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ನಗರದ ಥಣಿಸಂದ್ರದಲ್ಲಿ ವಶಕ್ಕೆ ಪಡೆದಿರುವುದು ವರದಿಯಾಗಿದೆ.
ಆರೋಪಿ ಆರೀಫ್ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎಂದು ಹೇಳಲಾಗಿದ್ದು, ಅಷ್ಟರಲ್ಲಿಯೇ ಆತನನ್ನು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ''ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ, ಸದಾ ಕಣ್ಗಾವಲು ಇರಿಸಿದ್ದು, ಭಾರತವನ್ನು ದುರ್ಬಲ ಗೊಳಿಸುವ ಎಲ್ಲಾ ಪ್ರಯತ್ನಗಳನ್ನು, ಹತ್ತಿಕ್ಕಲಾಗುವುದು'' ಎಂದು ಹೇಳಿದ್ದಾರೆ.
Next Story





