ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ

ಬೆಂಗಳೂರು, ಫೆ.11: ಶಾಲೆಗೆ ತೆರಳುತ್ತಿದ್ದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಂಬಂಧ ಓರ್ವನನ್ನು ಇಲ್ಲಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಿಹಾರ ಮೂಲದ ತನ್ನ ಕುಟುಂಬದೊಂದಿಗೆ ವಿವೇಕನಗರ ವ್ಯಾಪ್ತಿಯಲ್ಲಿ ವಾಸವಿದ್ದ ಬಾಲಕಿ ಫೆ.9ರಂದು ಬೆಳಗ್ಗೆ 8.15ರ ಸುಮಾರಿಗೆ ಶಾಲೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್ ಮೆಕ್ಯಾನಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಆನಂತರ, ಬಾಲಕಿಯ ಮಾಹಿತಿ ಮೇರೆಗೆ ಆಕೆಯ ತಾಯಿ ವಿವೇಕನಗರ ಠಾಣೆಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಕ್ಸೊ ಪ್ರಕರಣ ದಾಖಲಿಸಿಕೊಂಡ ವಿವೇಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ವಿಧಾನಸಭೆ ಚುನಾವಣೆ | ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಆಗ್ರಹ
Next Story





