ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

ಮಂಗಳೂರು, ಫೆ.11: ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ದ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಚಾಲನೆ ನೀಡಿದರು.
ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸಹಕಾರ ಸಚಿವ ಸೋಮಶೇಖರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
.jpeg)

Next Story