ಕೈರಂಗಳ: ಶಬ್ದಮಾಲಿನ್ಯ ಮಾಹಿತಿ ಕಾರ್ಯಕ್ರಮ

ಕೊಣಾಜೆ: ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಕಿವಿ ಮೂಗು ಗಂಟಲು ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ಕೈರಂಗಳದ ಶಾರದಾ ಗಣಪತಿ ವಿದ್ಯಾ ಕೇಂದ್ರದ ಪ್ರೌಢ ಶಾಲೆಯ ಮಕ್ಕಳಿಗೆ "ಶಬ್ದ ಮಾಲಿನ್ಯದ" ಬಗ್ಗೆ ತಿಳುವಳಿಕೆ ನೀಡುವ ಕಾರ್ಯಕ್ರಮ ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿಗಳಾದ ರಮೇಶ್ ಕೆ ಎಮ್, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾರದಾ ಗಣಪತಿ ವಿದ್ಯಾ ಕೇಂದ್ರದ ಸಂಚಾಲಕರಾದ ರಾಜಾರಾಮ್ ಭಟ್ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ತಮ್ಮ ಶಾಲೆಯ ವಿದ್ಯಾರ್ಥಿಗಳು ನಿಟ್ಟೆ ವಿಶ್ವವಿದ್ಯಾಲಯದ ನಿಶಬ್ದ ಯೋಜನೆಯೊಂದಿಗೆ ಸಹಕರಿಸುವುದಾಗಿ ಆಶ್ವಾಸನೆ ನೀಡಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಸತೀಶ್ ಕುಮಾರ್ ಭಂಡಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಕಿವಿ ಮೂಗು ಗಂಟಲು ವಿಭಾಗದ ಪ್ರಾಧ್ಯಾಪಕರವಾದ ಡಾ. ರಾಜೇಶ್ವರಿ ಇವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಬ್ದ ಮಾಲಿನ್ಯದ ಬಗ್ಗೆ ತಿಳುವಳಿಕೆ ಮೂಡಿಸಿದರು. ಕಿವಿ ಮೂಗು ಗಂಟಲು ವಿಭಾಗದ ಮುಖ್ಯಸ್ಥರಾದ ಡಾ.ವಾದೀಶ ಭಟ್ ಇವರು ಸ್ವಾಗತಿಸಿದರು, ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರವಣ್ ಆಳ್ವ ಇವರು ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಹರಿ ಕೆ ಅವರು ಹಾಗೂ ಉಪ ಪ್ರಾಂಶುಪಾಲರಾದ ರಮಣಿ ಭಂಡಾರಿ ಉಪಸ್ಥಿತರಿದ್ದರು.
ಸುಮಿತಾ ವಿ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುಮಾರು 250 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು