Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲ್ಲೇಶ್ವರಂನಲ್ಲಿ 10 ಲ್ಯಾಂಗ್ವೇಜ್...

ಮಲ್ಲೇಶ್ವರಂನಲ್ಲಿ 10 ಲ್ಯಾಂಗ್ವೇಜ್ ಲ್ಯಾಬ್ ಸ್ಥಾಪನೆ: ಸಚಿವ ಡಾ.ಅಶ್ವತ್ಥ ನಾರಾಯಣ

11 Feb 2023 9:38 PM IST
share
ಮಲ್ಲೇಶ್ವರಂನಲ್ಲಿ 10 ಲ್ಯಾಂಗ್ವೇಜ್ ಲ್ಯಾಬ್ ಸ್ಥಾಪನೆ: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಫೆ. 11: ಯುವಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿಸುವ ನಿಟ್ಟಿನಲ್ಲಿ ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್‍ಗಳನ್ನು ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಶನಿವಾರ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೆ ಅಡ್ಡರಸ್ತೆಯಲ್ಲಿ ಇರುವ ಸರಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಅವಕಾಶಗಳಿಗೆ ಕೊರತೆ ಇಲ್ಲ. ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಈಗಾಗಲೇ 250 ಕಂಪೆನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದರು.

ಬೆಂಗಳೂರು ಇಂದು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಈಗ ಲಕ್ಷಗಟ್ಟಲೆ ಜನರಿಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮವಾಗಿ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಇಡೀ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದು ಅವರು ವಿವರಿಸಿದರು.

ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಸರಕಾರವು ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. ಸರ್ವರಿಗೂ ಉದ್ಯೋಗ ಎನ್ನುವುದೇ ಸರಕಾರದ ನೀತಿಯಾಗಿದೆ ಎಂದ ಅವರು ಇಂದಿನ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್ಸೆಸ್ಸೆಲ್ಸಿಯಿಂದ ಹಿಡಿದು ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

share
Next Story
X