ಸಾಗರ| ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಪಾರು

ಸಾಗರ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು, ಚಾಲಕ ಪಾರಾಗಿರುವ ಘಟನೆ ಸಾಗರ ನಗರದ ಎಲ್ಐಸಿ ಕಚೇರಿ ಮುಂಭಾಗ ರವಿವಾರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ.
ಸೊರಬ ತಾಲೂಕಿನ ಉಳವಿಯ ವಿಜಯ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ವಿಜಯ್ ಅವರು ಸಾಗರದಲ್ಲಿ ನಡೆಯುತ್ತಿರುವ ಮಾರಿಜಾತ್ರೆಗೆ ಹೊರಟ್ಟಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಿ.ಎಚ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬೆಂಕಿ ಕಾಣಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವಿಜಯ್ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಕಾರಿನ ಇಂಜಿನ್, ಬ್ಯಾಟರಿ ಹಾಗೂ ಕಾರಿನ ಮುಂಭಾಗ ಸುಟ್ಟು ಕರಕಲಾಗಿದೆ. ಸ್ಥಳೀಯರೇ ಮುಂದೆ ನಿಂತು ನೀರು ಹಾಯಿಸಿ ಬೆಂಕಿ ನಿಯಂತ್ರಣಕ್ಕೆ ಶ್ರಮಪಟ್ಟರು. ಇದರಿಂದ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
Next Story





