Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ್ರೋಹ ಎಲ್ಲ ಪತ್ರಿಕೋದ್ಯಮ ಸಾಹಸಗಳ...

ದೇಶದ್ರೋಹ ಎಲ್ಲ ಪತ್ರಿಕೋದ್ಯಮ ಸಾಹಸಗಳ ಪಾಲಿಗೆ ಬಗಲಿನಲ್ಲಿಯ ಮುಳ್ಳು: ಮಾಜಿ ಸಿಜೆಐ ಯು.ಯು.ಲಲಿತ್

12 Feb 2023 3:50 PM IST
share
ದೇಶದ್ರೋಹ ಎಲ್ಲ ಪತ್ರಿಕೋದ್ಯಮ ಸಾಹಸಗಳ ಪಾಲಿಗೆ ಬಗಲಿನಲ್ಲಿಯ ಮುಳ್ಳು: ಮಾಜಿ ಸಿಜೆಐ ಯು.ಯು.ಲಲಿತ್

ಹೊಸದಿಲ್ಲಿ,ಫೆ.12: ದೇಶದ್ರೋಹವು ಯಾವಾಗಲೂ ಎಲ್ಲ ಪತ್ರಿಕೋದ್ಯಮ ಸಾಹಸಗಳ ಪಾಲಿಗೆ ಬಗಲಿನಲ್ಲಿಯ ಮುಳ್ಳಾಗಿದೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಾಧೀಶ (ಸಿಜೆಐ) ಯು.ಯು.ಲಲಿತ್ ಅವರು ಹೇಳಿದ್ದಾರೆ.

ಶುಕ್ರವಾರ ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ನ ಪತ್ರಿಕೋದ್ಯಮದಲ್ಲಿ ಶ್ರೇಷ್ಠತೆಗಾಗಿ 2022ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸ್ವಾತಂತ್ರ ಹೋರಾಟಗಾರ ಬಾಲ ಗಂಗಾಧರ ಟಿಳಕ್ರನ್ನು ಉಲ್ಲೇಖಿಸಿದ ಅವರು,ನ್ಯಾಯಯುತವಾದ ಟೀಕೆ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಆಗಿದೆ,ಅದು ಪ್ರತಿಯೊಬ್ಬ ಪತ್ರಕರ್ತ ಪಾಲಿಸಬೇಕಾದ ಹಕ್ಕು ಆಗಿದೆ ಎಂದು ಹೇಳಿದರು.

ಬ್ರಿಟಿಷ್ ಆಡಳಿತವು ತನ್ನ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಿದ್ದಾಗ ಟಿಳಕ್ ನ್ಯಾಯಾಲಯದಲ್ಲಿ ತನ್ನನ್ನು ಸಮರ್ಥಿಸಿಕೊಂಡಿದ್ದರು. ಆದರೂ ಅವರನ್ನು ದೇಶದ್ರೋಹ ಕಾನೂನಿನಡಿ ದೋಷಿ ಎಂದು ಘೋಷಿಸಿದ್ದ ನ್ಯಾಯಾಲಯವು ಆರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
‘ಸರಕಾರದ ನೀತಿಗಳು ಮತ್ತು ಕಾರ್ಯಗಳ ಬಗ್ಗೆ ಟೀಕಿಸಲು ನನಗೆ ಎಲ್ಲ ಹಕ್ಕು ಇದೆ. ನಾನು ಅದನ್ನು ಮಾಡಿದರೆ ಅದು ದೇಶದ್ರೋಹವಾಗುವುದಿಲ್ಲ. ದೇಶದ್ರೋಹ ಅದಕ್ಕಿಂತ ದೊಡ್ಡದು;ದಂಗೆಯನ್ನೆಬ್ಬಿಸಲು ಅಸಮಾಧಾನವನ್ನು ಪ್ರಚೋದಿಸುವದು. ಜನರ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾನು ಏನನ್ನಾದರೂ ಮಾಡಿದರೆ ಅದು ದೇಶದ್ರೋಹವಲ್ಲ ’ಎಂದು ನ್ಯಾ.ಲಲಿತ್ ಹೇಳಿದರು.

ಕಳೆದ ವರ್ಷ,ಐಪಿಸಿಯ 124ಎ ಕಲಮ್ನಡಿಯ ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನನ್ನು ಅಮಾನತಿನಲ್ಲಿರಿಸಿದ್ದ ಸರ್ವೋಚ್ಚ ನ್ಯಾಯಾಲಯವು,ಕಾನೂನನ್ನು ಪುನರ್ಪರಿಶೀಲಿಸುವವರೆಗೆ ಅದರಡಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸದಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೂಚಿಸಿತ್ತು.

ಹಲವಾರು ಪತ್ರಕರ್ತರು,ಸಾಮಾಜಿಕ ಕಾರ್ಯಕರ್ತರು ಮತ್ತು ರಾಜಕೀಯ ನಾಯಕರೂ ದೇಶದ್ರೋಹ ಕಾನೂನಿನ ಪರಿಶೀಲನೆಯನ್ನು ಕೊರಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

share
Next Story
X