Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನದಲ್ಲಿ ಕಾಲಕ್ಕೆ ತಕ್ಕಂತೆ...

ಯಕ್ಷಗಾನದಲ್ಲಿ ಕಾಲಕ್ಕೆ ತಕ್ಕಂತೆ ಮಾರ್ಪಡು ಅವಶ್ಯಕ: ಸೋದೆ ಶ್ರೀ

76 ಮಂದಿ ಸಾಧಕ ಕಲಾವಿದರಿಗೆ ’ಸಮ್ಮೇಳನ ಸಂಮಾನ’ ಗೌರವ

12 Feb 2023 5:24 PM IST
share
ಯಕ್ಷಗಾನದಲ್ಲಿ ಕಾಲಕ್ಕೆ ತಕ್ಕಂತೆ ಮಾರ್ಪಡು ಅವಶ್ಯಕ: ಸೋದೆ ಶ್ರೀ
76 ಮಂದಿ ಸಾಧಕ ಕಲಾವಿದರಿಗೆ ’ಸಮ್ಮೇಳನ ಸಂಮಾನ’ ಗೌರವ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಉಡುಪಿ ಜಿಲ್ಲಾಡಳಿತ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಎರಡನೇ ದಿನವಾದ ರವಿವಾರ ಮಲ್ಪೆಶಂಕರನಾರಾಯಣ ಸಾಮಗ ವೇದಿಕೆಯಲ್ಲಿ ಸಾಧಕ ಕಲಾವಿದರಿಗೆ ’ಸಮ್ಮೇಳನ ಸಂಮಾನ’ ನೀಡಿ ಗೌರವಿಸಲಾಯಿತು.

ಹಿರಿಯ ಕಲಾವಿದರಾದ ಕೆ.ಗೋವಿಂದ ಭಟ್, ಐರೋಡಿ ಗೋವಿಂದಪ್ಪ, ಆರ್ಗೋಡು ಮೋಹನದಾಸ ಶೆಟ್ಟಿ, ಲೀಲಾವತಿ ಬೈಪಡಿತ್ತಾಯ, ಗುರುವಯ್ಯ ಒಡೆಯರ್ ಹೊಳಲ್‌ಕೆರೆ ಸೇರಿದಂತೆ 76 ಮಂದಿ ಹಿರಿಯ ಸಾಧಕರು, ಸಂಘಸಂಸ್ಥೆಗಳು, ಪತ್ರಿಕೆ, ಯಕ್ಷಗಾನ ಪೋಷಕರನ್ನು ಸೋದೆ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಸ್ವಾಮೀಜಿ, ನೂರಾರು ವರ್ಷಗಳಿಂದ ಬೆಳೆದು ಬಂದಿ ರುವ ಯಕ್ಷಗಾನ ಕಲೆಯಲ್ಲಿ ಅನೇಕ ಮಾರ್ಪಡುಗಳಾಗಿವೆ. ಯಕ್ಷಗಾನದಲ್ಲಿ ವೈವಿಧ್ಯತೆ ಕಾಣಬೇಕಾದರೆ ಕಾಲಕ್ಕೆ ತಕ್ಕಂತೆ ಮಾರ್ಪಡು ಆಗುವುದು ಅತ್ಯಂತ ಅವಶ್ಯಕ. ಆದರೆ ಆ ಮಾರ್ಪಡು ಎಂದಿಗೂ ಯಕ್ಷಗಾನದ ಚೌಕಟ್ಟು ಮೀರಿ ಹೋಗಬಾರದು. ಅಂತಹ ಸುಧಾರಣೆಯನ್ನು ಎಲ್ಲರೂ ಸಾರ್ವಕಾಲಿಕವಾಗಿ  ಸ್ವಾಗತಿಸಬೇಕು ಎಂದರು.

ತೆಂಕುತಿಟ್ಟು ಹಾಗೂ ಬಡಗುತಿಟ್ಟು ಯಕ್ಷಗಾನಗಳ ಕೇಂದ್ರ ಸ್ಥಾನ ಉಡುಪಿ. ಇಲ್ಲಿ ಮಾತ್ರ ಈ ಎರಡೂ ತಿಟ್ಟುಗಳಿಗೆ ಸಮಾನವಾಗಿ ಪ್ರೇಕ್ಷಕರು ಇರುವುದು.  ಯಕ್ಷಗಾನ ಕಲಾವಿದರು ಪುರಾಣ ಪಾತ್ರಗಳನ್ನು ಜನ ಮುಂದೆ ಚಿತ್ರಿಸುವ ಶಿಲ್ಪಿಗಳು. ಯಕ್ಷಗಾನ ಇಂದಿಗೂ ಜೀವಂತವಾಗಿರುವ ಕಲೆ ಎಂದು ಅವರು ತಿಳಿಸಿದರು.

ಸಮ್ಮೇಳನಾಧ್ಯಕ್ಷ ಡಾ.ಎಂ.ಪ್ರಭಾಕರ ಜೋಷಿ ಮಾತನಾಡಿದರು. ಅಂಬಲ ಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಮುಖ್ಯ ಅತಿಥಿ ಯಾಗಿದ್ದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ, ಸ್ವಾಗತ ಸಮಿತಿ ಅಧ್ಯಕ್ಷ ರಘುಪತಿ ಭಟ್ ವಹಿಸಿದ್ದರು.

ಸಮ್ಮೇಳನ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಕುಮಟ, ಹಿರಿಯ ವೇಷಧಾರಿಗಳಾದ ಡಾ.ಕೋಳ್ಯೂರು ರಾಮಚಂದ್ರ ರಾವ್, ಪಾತಾಳ ವೆಂಕಟರಮಣ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಗಳಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಅಶೋಕ್ ಚಲವಾದಿ, ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್. ಶಿವರುದ್ರಪ್ಪ ಉಪಸ್ಥಿತರಿದ್ದರು.

ಸಮಿತಿ ಸದಸ್ಯ ಹರಿನಾರಾಯಣದಾಸ ಅಸ್ರಣ್ಣ ಸ್ವಾಗತಿಸಿದರು. ವಾದಿರಾಜ ಕಲ್ಲುರಾಯ ಸಾಧಕರ ಪಟ್ಟಿ ವಾಚಿಸಿದರು. ವಿದ್ಯಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶೃಂಗೇಶ್ವರ ರಾವ್ ವಂದಿಸಿದರು.

share
Next Story
X