Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಎರಡು ತಾಸಿನಲ್ಲಿ 1,700 ಅಡಿ...

ಬೆಳ್ತಂಗಡಿ: ಎರಡು ತಾಸಿನಲ್ಲಿ 1,700 ಅಡಿ ಎತ್ತರದ ಗಡಾಯಿ ಕಲ್ಲು ಏರಿದ ಜ್ಯೋತಿರಾಜ್

12 Feb 2023 6:20 PM IST
share
ಬೆಳ್ತಂಗಡಿ: ಎರಡು ತಾಸಿನಲ್ಲಿ 1,700 ಅಡಿ ಎತ್ತರದ ಗಡಾಯಿ ಕಲ್ಲು ಏರಿದ ಜ್ಯೋತಿರಾಜ್

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದಲ್ಲಿರುವ ಐತಿಹಾಸಿಕ ಕೋಟೆಯಾದ ಗಡಾಯಿ ಕಲ್ಲು ಅಥವಾ ಜಮಲಾಬಾದ್  ಕೋಟೆಯನ್ನು ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಏರಿ ತಮ್ಮ ಸಾಹಸವನ್ನು ಪ್ರದರ್ಶಿಸಿದ್ದಾರೆ.

ತನ್ನ ತಂಡದೊಂದಿಗೆ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಹೊರಟ ಜ್ಯೋತಿರಾಜ್ ಇಲ್ಲಿಂದ ಸುಮಾರು ಎರಡು ಕಿಮೀ. ದೂರವನ್ನು ಕಾಡುದಾರಿಯ ಮೂಲಕ ಕ್ರಮಿಸಿ ಗಂಟೆ 9.50ರ ಸುಮಾರಿಗೆ ಬರಿಗೈ ಮೂಲಕ ಗಡಾಯಿಕಲ್ಲನ್ನು ಏರತೊಡಗಿದರು. ಸಮುದ್ರಮಟ್ಟಕ್ಕಿಂತ 1,700 ಅಡಿ ಎತ್ತರದಲ್ಲಿರುವ ಗಡಾಯಿಕಲ್ಲಿನ ತುತ್ತ ತುದಿಯನ್ನು 11.50ಕ್ಕೆ ತಲುಪಿ ಅಲ್ಲಿ ತನ್ನ ತಂಡದೊಂದಿಗೆ ಕನ್ನಡ ಧ್ವಜವನ್ನು ಹಾರಿಸಿ ತಮ್ಮ ಬಹುದಿನದ ಆಸೆಯನ್ನು ಪೂರೈಸಿಕೊಂಡರು.

ಇವರ ಈ ಸಾಹಸದ ಹಿಂದೆ ತಂಡದ ಸದಸ್ಯರಾದ ಬಸವರಾಜ್, ರಾಜಶೇಖರ್, ಪವನ್ ಜೋಸ್, ನಿಂಗರಾಜು, ಮದನ್, ನವೀನ್, ಅಭಿ ಹಾಗೂ ಪವನ್ ಕುಮಾರ್, ಲಾಯಿಲ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಶೆಟ್ಟಿ ಏಣಿಂಜೆ, ಶೌರ್ಯ ವಿಪತ್ತು ತಂಡದ ಸದಸ್ಯರು ಅಗತ್ಯ ಸಹಕಾರ ನೀಡಿದರು.

ವನ್ಯಜೀವಿ ವಿಭಾಗದ ಡಿ ಆರ್ ಎಫ್ ಒ ಕಿರಣ್ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ನಾಲ್ಕು ಕಡೆ ವಿಶ್ರಾಂತಿ

ಅರಣ್ಯ ಇಲಾಖೆಯ ಸೂಚನೆಯಂತೆ ಸೊಂಟಕ್ಕೆ ಕಟ್ಟಿದ ಬೆಲ್ಟ್ ಹಾಗೂ ಪಕ್ಕದಲ್ಲಿದ್ದ ರೋಪ್ ಗೆ ಹುಕ್ ಮೂಲಕ ಸಂಪರ್ಕ ಕಲ್ಪಿಸಿ ಸುರಕ್ಷತೆ ದೃಷ್ಟಿಯಿಂದ ಮೇಲೆರಲು ಅವಕಾಶ ನೀಡಲಾಗಿತ್ತು. ಇವರು ಒಂದೊಂದು ಅಡಿ ಮೇಲೆರಿದಂತೆ ಗಡಾಯಿಕಲ್ಲಿನ ಮೇಲ್ಭಾಗದಲ್ಲಿದ್ದ ಸಂಗಡಿಗರು ರೋಪನ್ನು ಬಿಗಿಯುತ್ತ ಹತ್ತಲು ಸಹಾಯ ಆಗುವಂತೆ ವ್ಯವಸ್ಥೆ ಮಾಡುತ್ತಿದ್ದರು.

ಗಡಾಯಿ ಕಲ್ಲು ಹತ್ತಲು ಎರಡು ತಾಸು ಪಡೆದುಕೊಂಡ ಜ್ಯೋತಿರಾಜ್ ಮಧ್ಯೆ ನಾಲ್ಕು ಕಡೆಗಳಲ್ಲಿ ಕಲ್ಲಿನ ಪೊಟರೆ ಹಾಗೂ ಮರಗಳಲ್ಲಿ ಒಟ್ಟು ಅರ್ಧಗಂಟೆ ಅವಧಿ ವಿಶ್ರಾಂತಿ ಪಡೆದಿರುವುದಾಗಿ ತಿಳಿಸಿದ್ದಾರೆ. ಗಡಾಯಿಕಲ್ಲು ಹತ್ತಿದ ಬಳಿಕ ಅರ್ಧ ತಾಸು ವಿಶ್ರಾಂತಿ ಪಡೆದು ಮಾಮೂಲು ಮೆಟ್ಟಿಲಿನ ಮೂಲಕ ಸಂಗಡಿಗರೊಂದಿಗೆ ಕೆಳಗಿಳಿದು ಬಂದರು.

ಈ ಸಾಹಸವನ್ನು ವೀಕ್ಷಿಸಲು ಚಂದ್ಕೂರು ದೇವಸ್ಥಾನದ ಪರಿಸರದ ಅಲ್ಲಲ್ಲಿ ಜನರು ವಿರಳ ಸಂಖ್ಯೆಯಲ್ಲಿ ಕಂಡುಬಂದರು. ವನ್ಯಜೀವಿ ವಿಭಾಗವು ಜ್ಯೋತಿರಾಜ್ ಮತ್ತು ಅವರ ತಂಡಕ್ಕೆ ಮಾತ್ರ ಅರಣ್ಯ ಭಾಗದ ಮೂಲಕ ಗಡಾಯಿಕಲ್ಲಿನ ಬುಡ ಭಾಗಕ್ಕೆ ಹೋಗಲು ಅನುಮತಿ ನೀಡಿದ ಕಾರಣ ವೀಕ್ಷಣೆಗೆ ಆಗಮಿಸಿದವರು ಚಂದ್ಕೂರು ದೇವಸ್ಥಾನದ ಪರಿಸರದಿಂದಲೇ ವೀಕ್ಷಣೆ ನಡೆಸಬೇಕಾಯಿತು.

share
Next Story
X