Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ...

ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ನಾಳೆ (ಫೆ.13) ಪ್ರಧಾನಿ ಮೋದಿ ಚಾಲನೆ

ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿ: ರಾಜನಾಥ್ ಸಿಂಗ್

12 Feb 2023 8:56 PM IST
share
ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ನಾಳೆ (ಫೆ.13) ಪ್ರಧಾನಿ ಮೋದಿ ಚಾಲನೆ
ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿ: ರಾಜನಾಥ್ ಸಿಂಗ್

ಬೆಂಗಳೂರು: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2023’ಗೆ ನಾಳೆ (ಫೆ.13) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ಫೆ.13ರಿಂದ 17ರ ವರೆಗೆ ನಡೆಯಲಿರುವ ಐದು ದಿನಗಳ ಈ ಅಂತರ್ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ದೇಶದ ಏರೋಸ್ಪೇಸ್ ಮತ್ತು ರಕ್ಷಣಾ ಸಾಮಥ್ರ್ಯದ ಪ್ರದರ್ಶನವಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ‘ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್' ದೃಷ್ಟಿಗೆ ಅನುಗುಣವಾಗಿ, ಸ್ವದೇಶಿ ಉಪಕರಣಗಳು, ತಂತ್ರಜ್ಞಾನಗಳನ್ನು ಪ್ರದರ್ಶಿಸುವುದು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವುದರ ಮೇಲೆ ಕೇಂದ್ರೀಕರಿಸಲಾಗುತ್ತದೆ ಎಂದರು.

ಏರೋ ಇಂಡಿಯಾ 2023 ದೇಶದ ಉತ್ಪಾದನಾ ಸಾಮಥ್ರ್ಯ ಮತ್ತು ಪ್ರಧಾನಮಂತ್ರಿ ರೂಪಿಸಿದ ‘ಆತ್ಮನಿರ್ಭರ ಭಾರತ್’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಸಾಧಿಸಿದ ಪ್ರಗತಿಯನ್ನು ಪ್ರದರ್ಶಿಸುತ್ತದೆ. ಈ ಪ್ರದರ್ಶನವು ಏರೋಸ್ಪೇಸ್ ಮತ್ತು ವಾಯುಯಾನ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಫೆ.13 ರಿಂದ 15ರ ವರೆಗೆ ವ್ಯವಹಾರಿಕವಾದ ಸಭೆಗಳು, ಗೋಷ್ಠಿಗಳು ನಡೆಯಲಿವೆ. ಫೆ.16 ಮತ್ತು 17ರಂದು ಸಾರ್ವಜನಿಕರಿಗೆ ವೈಮಾನಿಕ ಪ್ರದರ್ಶನ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ. ಈ ವೈಮಾನಿಕ ಪ್ರದರ್ಶನದ ಅಂಗವಾಗಿ ಸಿಇಒ ರೌಂಡ್ ಟೇಬ್, ಮಂಥನ್ ಸ್ಟಾರ್ಟ್ ಅಪ್ ಈವೆಂಟ್, ಬಂಧನ್ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.

ಯಲಹಂಕದ ಏರ್ ಫೋರ್ಸ್ ಸ್ಟೇಷನ್‍ನಲ್ಲಿ ಒಟ್ಟು 35ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿ ಆಯೋಜಿಸಲಾಗುತ್ತಿರುವ ಈ ವೈಮಾನಿಕ ಪ್ರದರ್ಶನವು ಇದುವರೆಗಿನ ಅತಿದೊಡ್ಡ ಕಾರ್ಯಕ್ರಮವಾಗಿದೆ. 98 ದೇಶಗಳು ಇದರಲ್ಲಿ ಪಾಲ್ಗೊಳ್ಳಲಿವೆ. 32 ದೇಶಗಳ ರಕ್ಷಣಾ ಸಚಿವರು, 29 ದೇಶಗಳ ವಾಯು ಮುಖ್ಯಸ್ಥರು ಮತ್ತು ಜಾಗತಿಕ ಮತ್ತು ಭಾರತೀಯ ಸಂಸ್ಥೆಗಳ 73 ಸಿಇಒಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಪ್ರಮುಖ ಪ್ರದರ್ಶಕರು ಮತ್ತು ಉಪಕರಣಗಳು: ಏರ್‍ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್‍ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರಿ, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಎಚ್‍ಸಿ ರೋಬೋಟಿಕ್ಸ್, ಎಸ್‍ಎಬಿ, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸೆನ್ ಮತ್ತು ಟಬ್ರೋ, ಹಿಂದೂಸ್ತಾನ್ ಏರೋನಾಟಿಕ್ಸ್ ಸೇರಿದಂತೆ ಅನೇಕ ಪ್ರದರ್ಶಕರು ತಮ್ಮ ಉಪಕರಣಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಅವರು ತಿಳಿಸಿದರು.

ಏರೋ ಇಂಡಿಯಾ ಪ್ರದರ್ಶನವು ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ತೇಜಸ್, ಎಚ್.ಟಿ.ಟಿ-40, ಡೋರ್ನಿಯರ್ ಲೈಟ್ ಯುಟಿಲಿಟಿ ಹೆಲಿಕಾಪ್ಟರ್, ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರ್ ಮತ್ತು ಅಡ್ವಾನ್ಡ್ ಲೈಟ್ ಹೆಲಿಕಾಪ್ಟರ್‍ಗಳ ರಫ್ತುಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.  ಜೊತೆಗೆ, ಸಹ-ಅಭಿವೃದ್ಧಿ, ಸಹ-ಉತ್ಪಾದನೆಗಾಗಿ ಪಾಲುದಾರಿಕೆಯನ್ನು ಒಳಗೊಂಡಂತೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು. 

ಮುಂಬರುವ ದಿನಗಳಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿ ಹೊರಹೊಮ್ಮಲು ಸಹಾಯ ಮಾಡುವಲ್ಲಿ ಬಲವಾದ ಮತ್ತು ಸ್ವಾವಲಂಬಿ ರಕ್ಷಣಾ ವಲಯವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ರಕ್ಷಣಾ ಕ್ಷೇತ್ರದಲ್ಲಿನ ಸಾಧನೆಗಳು ಭಾರತೀಯ ಆರ್ಥಿಕತೆಗೆ ವ್ಯಾಪಕವಾದ ಲಾಭಗಳನ್ನು ಒದಗಿಸುತ್ತವೆ ಎಂದು ಅವರು ಹೇಳಿದರು.

ಭಾರತದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಸ್ಟಾರ್ಟ್‍ಅಪ್‍ಗಳು ಮತ್ತು ಯುನಿಕಾರ್ನ್‍ಗಳು ಭಾರತವು ಇಂದು ಸ್ಟಾರ್ಟ್‍ಅಪ್‍ಗಳಿಗೆ ಹೆಚ್ಚು ಅನುಕೂಲಕರ ವಾತಾವರಣವನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ ಎಂಬುದಕ್ಕೆ ಪುರಾವೆಯಾಗಿದೆ. ಮಂಥನ್ ಮೂಲಕ, ನಮ್ಮ ಯುವಕರು, ರಕ್ಷಣಾ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಇ-ನಿರ್ವಹಣೆ, ವರ್ಧಿತ ಮತ್ತು ವರ್ಚುವಲ್ ರಿಯಾಲಿಟಿ, ಸ್ವಾಯತ್ತ ವ್ಯವಸ್ಥೆಗಳು ಮತ್ತು ಭವಿಷ್ಯದ ಶಕ್ತಿಗಳಿಗಾಗಿ ಇತರ ಆವಿಷ್ಕಾರಗಳು ತಮ್ಮ ಸಾಮಥ್ರ್ಯಗಳನ್ನು ಪ್ರದರ್ಶಿಸಲು ಮತ್ತು ತಮ್ಮನ್ನು ತಾವು ಸಶಕ್ತಗೊಳಿಸಲು ಸಾಧ್ಯವಾಗುತ್ತದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

ಐದು ದಿನಗಳ ಕಾರ್ಯಕ್ರಮದಲ್ಲಿ ಹಲವು ವಿಚಾರ ಸಂಕಿರಣಗಳು ನಡೆಯಲಿವೆ. ಏರೋ ಇಂಡಿಯಾ-2023 ಪ್ರತ್ಯೇಕ ಕರ್ನಾಟಕ ಪೆವಿಲಿಯನ್ ಅನ್ನು ಹೊಂದಿರುತ್ತದೆ, ಇದು ಭಾಗವಹಿಸುವವರಿಗೆ ರಾಜ್ಯದಲ್ಲಿ ಲಭ್ಯವಿರುವ ಅವಕಾಶಗಳನ್ನು ಪ್ರದರ್ಶಿಸುತ್ತದೆ. ಕರ್ನಾಟಕವು ದೇಶದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿರುವ ಮುಂಚೂಣಿಯಲ್ಲಿರುವ ರಾಜ್ಯ ಎಂದು ಅವರು ಬಣ್ಣಿಸಿದರು.

share
Next Story
X