ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ‘ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ರವಿವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.
ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.
ಎಚ್‍ಎಎಲ್ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿಯೆ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಫೆ.13) ಬೆಳಗ್ಗೆ ರಾಜಭವನದಿಂದ ರಸ್ತೆ ಮೂಲಕ ನಗರದ ಮೇಖ್ರಿ ವೃತ್ತದ ಬಳಿಯಿರುವ ಏರ್‍ಫೋರ್ಸ್ ಕಮಾಂಡ್ ಸೆಂಟರ್ ಗೆ ಆಗಮಿಸಲಿರುವ ಅವರು, ಅಲ್ಲಿಂದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟಿಸಲು ಹೆಲಿಕಾಪ್ಟರ್ ನಲ್ಲಿ ಯಲಹಂಕ ವಾಯುನೆಲೆಗೆ ತೆರಳಲಿದ್ದಾರೆ.
Next Story





