Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ...

ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ: ಸಿಎಂ ಬೊಮ್ಮಾಯಿ

14ನೇ ಆವೃತ್ತಿಯ 'ಏರೋ ಇಂಡಿಯಾ ಶೋ-2023

13 Feb 2023 12:09 PM IST
share
ಭಾರತ ಜಾಗತಿಕ ನಾಯಕವಾಗಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ: ಸಿಎಂ ಬೊಮ್ಮಾಯಿ
14ನೇ ಆವೃತ್ತಿಯ 'ಏರೋ ಇಂಡಿಯಾ ಶೋ-2023

ಬೆಂಗಳೂರು, ಫೆ.13: ಭಾರತವನ್ನು ಜಾಗತಿಕ ನಾಯಕವಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು 14ನೇ ಆವೃತ್ತಿಯ 'ಏರೋ ಇಂಡಿಯಾ ಶೋ-2023ದಲ್ಲಿ ಪ್ರಧಾನಿಯೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು.

ಈ ಕಾರ್ಯಸಾಧನೆಗೆ ಪ್ರಧಾನಿಗಳ ಆಶಯದಂತೆ ಕರ್ನಾಟಕವು ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ಕೊಡುಗೆ ನೀಡಲಿದೆ ಎಂದವರು ಭರವಸೆ ನೀಡಿದರು.

 ಏರೋ ಇಂಡಿಯಾ ಶೋ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷವಾಗಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದ ಅತಿ  ದೊಡ್ಡ ಏರ್ ಶೋ ಆಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್  ಏರ್ ಶೋ ನಡೆಯದಿದ್ದಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತು.  ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದರು.

ಕರ್ನಾಟಕ ಹಿಂದಿರುಗಿ ನೋಡಿಲ್ಲ

ಕರ್ನಾಟಕದಲ್ಲಿ 1940 ರಲ್ಲಿ ಎಚ್.ಎ.ಎಲ್., 1950ರಲ್ಲಿ ಬಿ.ಎಚ್.ಇ.ಎಲ್., ಬಿ.ಇ.ಎಲ್., ಡಿ.ಆರ್.ಡಿ.ಒ. ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿದರೆ, 1970 ರಲಿ ಮೊದಲ ಸ್ಯಾಟಲೈಟ್  ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಲ್ಲಿ ತಯಾರಿಸಲಾಯಿತು. ಅಲ್ಲಿಂದ ನಾವು ಹಿಂದಿರುಗಿ ನೋಡಿಲ್ಲ. ಈಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ರಕ್ಷಣಾ ವಲಯದ  ಶೇ.65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದರು.

45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ

ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದರು. 

ಕರ್ನಾಟಕ 14 ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿ ಹಾಗೂ ರಕ್ಷಣಾ ಸಚಿವರಿಗೆ  ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದರು.

ಇದನ್ನೂ ಓದಿ: ಬೆಂಗಳೂರು: 14ನೇ ಏರ್ ಶೋ 'ಏರೋ ಇಂಡಿಯಾ-2023'ಗೆ ಪ್ರಧಾನಿ ಮೋದಿ ಚಾಲನೆ

share
Next Story
X