ಮಂಗಳೂರಿಗೆ ಆಗಮಿಸಿದ 'ಸೂಪರ್ ಸ್ಟಾರ್' ರಜನಿಕಾಂತ್!

ಮಂಗಳೂರು, ಫೆ.13: ತಮಿಳು ಚಿತ್ರರಂಗದ 'ಸೂಪರ್ ಸ್ಟಾರ್' ರಜನಿಕಾಂತ್ ರವಿವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.
ರಾತ್ರಿ ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ಸಿನೆಮಾ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದು, ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ಸಿನೆಮಾ ತಂಡವನ್ನು ಸೇರಿಕೊಂಡಿದ್ದಾರೆ.
ಪಿಲಿಕುಳದ ಗುತ್ತಿನಮನೆಯಲ್ಲಿ ಸಿನೆಮಾ ಚಿತ್ರೀಕರಣ ನಡೆಯಲಿದೆ ಎಂದು ತಿಳಿದುಬಂದಿದೆ.
Next Story





