5, 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು, ಫೆ.13: ರಾಜ್ಯ ಸರಕಾರವು ಇದೇ ಮೊದಲ ಬಾರಿಗೆ ರಾಜ್ಯ ಪಠ್ಯಕ್ರಮವನ್ನು ಅಧ್ಯಯನ ಮಾಡುತ್ತಿರುವ 5 ಮತ್ತು 8ನೆ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸುತ್ತಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು https://kseab.karnataka.gov.in/ ನಲ್ಲಿ ಪ್ರಕಟಿಸಿದೆ.
5ನೆ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲೀಷ್, ಗಣಿತ ಮತ್ತು ಪರಿಸರ ಅಧ್ಯಯನ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. 8ನೆ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ, ಗಣಿತ, ಸಮಾಜ, ವಿಜ್ಞಾನ ವಿಷಯಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎರಡು ತರಗತಿಯ ಪ್ರತಿ ವಿಷಯದಲ್ಲೂ 40 ಅಂಕಗಳಿದ್ದು, 28 ಪ್ರಶ್ನೆಗಳನ್ನು ಹೊಂದಿದೆ.
Next Story





