Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಳೆ ಮೈಸೂರು ಭಾಗಕ್ಕೆ ಬಿಜೆಪಿ ಒತ್ತು,...

ಹಳೆ ಮೈಸೂರು ಭಾಗಕ್ಕೆ ಬಿಜೆಪಿ ಒತ್ತು, ಫೆ.20ಕ್ಕೆ ಮಂಡ್ಯದಲ್ಲಿ ಯುವ ಮೋರ್ಚಾದ ಮೊದಲ ಸಮಾವೇಶ

14 Feb 2023 11:20 AM IST
share
ಹಳೆ ಮೈಸೂರು ಭಾಗಕ್ಕೆ ಬಿಜೆಪಿ ಒತ್ತು, ಫೆ.20ಕ್ಕೆ ಮಂಡ್ಯದಲ್ಲಿ ಯುವ ಮೋರ್ಚಾದ ಮೊದಲ ಸಮಾವೇಶ

ಬೆಂಗಳೂರು, ಫೆ. 14:  ಹಳೆ ಮೈಸೂರು ಭಾಗಕ್ಕೆ ಬಿಜೆಪಿ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. 

ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶ ಆದರೆ ಅಲ್ಲಿಗೆ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ- ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಸಂಚಾಲಕ, ಸಹ ಸಂಚಾಲಕರ ನೇಮಕ ಆಗಿದ್ದು, ಇವತ್ತು ಸಭೆ ನಡೆಯುತ್ತಿದೆ. ಇದೇ 16ರಂದು ಎಲ್ಲ ಮೋರ್ಚಾಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ರಾಜ್ಯದ ಚುನಾವಣೆ ಪ್ರಕ್ರಿಯೆ ಬಳಿಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಐತಿಹಾಸಿಕ ಗೆಲುವು ಬಿಜೆಪಿಯದ್ದಾಗಲು ನಮ್ಮೆಲ್ಲ ಮೋರ್ಚಾಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಮೋರ್ಚಾ ಸಮಾವೇಶಗಳು ಬಿಜೆಪಿಗೆ ಗೆಲುವಿಗೆ ಪೂರಕ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಉಪ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಲಭಿಸಿತ್ತು. ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ. 20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಗರದಲ್ಲಿ ನಡೆಯಲಿದೆ. ಕೇಂದ್ರದ ನಾಯಕರು ಬರುವ ನಿರೀಕ್ಷೆ ಇದೆ. ಕೇಂದ್ರ ನಾಯಕ ಅಮಿತ್ ಶಾ ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿದ್ದಾರೆ. ಇದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ ಎಂದು ವಿವರಿಸಿದರು.

'50 ಲಕ್ಷ ಮತದಾರರ ಸದಸ್ಯತ್ವ ನೋಂದಣಿ';

ಸಮಾವೇಶಗಳ ಮೂಲಕ 2 ಕೋಟಿ ಮತದಾರರನ್ನು ತಲುಪುವುದು, 50 ಲಕ್ಷ ಹೊಸ ಮತದಾರರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಗುರಿ ಇದೆ ಎಂದು ತಿಳಿಸಿದರು. ಪಕ್ಷದಲ್ಲಿರುವ 7 ಮೋರ್ಚಾಗಳಾದ ಯುವ ಮೋರ್ಚಾ, ಎಸ್ಸಿ ಮೋರ್ಚಾ, ಎಸ್ಟಿ ಮೋರ್ಚಾ, ಒಬಿಸಿ ಮೋರ್ಚಾ, ಮಹಿಳಾ ಮೋರ್ಚಾ, ರೈತ ಮೋರ್ಚಾ ಮತ್ತು ಅಲ್ಪಸಂಖ್ಯಾತ ಮೋರ್ಚಾಗಳನ್ನು ಸಕ್ರಿಯಗೊಳಿಸುವ ಗುರಿಯನ್ನು ಸಮಾವೇಶಗಳು ಹೊಂದಿವೆ.  ಈ ಸಂದರ್ಭದಲ್ಲಿ ಪ್ರಧಾನಿಯವರ ಅಮೃತ್ ಕಾಲ್ ಯೋಜನೆಯನ್ನು ಸಾಕಾರಗೊಳಿಸಲು ಹಾಗೂ ದೇಶ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಳ್ಳಲು ಬಯಸುವ ಯುವಜನತೆಯನ್ನು ಪಕ್ಷಕ್ಕೆ  ಸೇರ್ಪಡೆಗೊಳಿಸಲು ತೀರ್ಮಾನಿಸಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಸಮಾವೇಶಗಳ ರಾಜ್ಯ ಸಹ ಸಂಚಾಲಕರಾದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಹಾಗೂ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

share
Next Story
X