Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಬಿಬಿಸಿ ಕಚೇರಿಯಿಂದ ಫೋನ್‌,...

ದಿಲ್ಲಿಯ ಬಿಬಿಸಿ ಕಚೇರಿಯಿಂದ ಫೋನ್‌, ಲ್ಯಾಪ್‌ಟಾಪ್‌ ಗಳನ್ನು ವಶಕ್ಕೆ ಪಡೆದ ಆದಾಯ ತೆರಿಗೆ ಇಲಾಖೆ

14 Feb 2023 12:42 PM IST
share
ದಿಲ್ಲಿಯ ಬಿಬಿಸಿ ಕಚೇರಿಯಿಂದ ಫೋನ್‌, ಲ್ಯಾಪ್‌ಟಾಪ್‌ ಗಳನ್ನು ವಶಕ್ಕೆ ಪಡೆದ ಆದಾಯ ತೆರಿಗೆ ಇಲಾಖೆ

ಹೊಸದಿಲ್ಲಿ, ಫೆ.14: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡಗಳು ಮಂಗಳವಾರ ದಿಲ್ಲಿ ಮತ್ತು ಮುಂಬೈಗಳಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿವೆ. ಅಧಿಕಾರಿಗಳು ಕೆಲವು ಉದ್ಯೋಗಿಗಳ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ ಎಂದು ಬೆಳವಣಿಗೆಗಳನ್ನು ಬಲ್ಲ ವ್ಯಕ್ತಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತೆರಿಗೆ ವಂಚನೆಯ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆಯು ‘ಸಮೀಕ್ಷಾ ಕಾರ್ಯಾಚರಣೆ’ಯನ್ನು ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು. ಇಲಾಖೆಯ ಸಮೀಕ್ಷೆಯಲ್ಲಿ ಕಂಪನಿಯ ಕಚೇರಿ ಆವರಣಗಳು ಮಾತ್ರ ಒಳಗೊಂಡಿರುತ್ತವೆ ಮತ್ತು ಅದರ ಪ್ರವರ್ತಕರು ಅಥವಾ ನಿರ್ದೇಶಕರ ಮನೆಗಳು ಮತ್ತು ಇತರ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುವುದಿಲ್ಲ.

ಬೆಳವಣಿಗೆಯನ್ನು ದೃಢಪಡಿಸಿರುವ ಬಿಬಿಸಿ,ಆದಾಯ ತೆರಿಗೆ ಅಧಿಕಾರಿಗಳಿಗೆ ತಾನು ಸಂಪೂರ್ಣ ಸಹಕಾರವನ್ನು ನೀಡುತ್ತಿರುವುದಾಗಿ ತಿಳಿಸಿದೆ. ‘ಸಾಧ್ಯವಾದಷ್ಟು ಶೀಘ್ರ ಈ ಸ್ಥಿತಿಯು ಬಗೆಹರಿಯುತ್ತದೆ ಎಂದು ನಾವು ಆಶಿಸಿದ್ದೇವೆ ’ಎಂದು ಅದು ಟ್ವೀಟಿಸಿದೆ.

2002ರಲ್ಲಿ ಗುಜರಾತಿನಲ್ಲಿ ಸಂಭವಿಸಿದ್ದ ಕೋಮು ದಂಗೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆನ್ನಲಾದ ಪಾತ್ರದ ಕುರಿತು ಪರಿಶೀಲಿಸಿರುವ ಎರಡು ಭಾಗಗಳ ಸಾಕ್ಷಚಿತ್ರವನ್ನು ಬಿಬಿಸಿ ಕಳೆದ ಜನವರಿಯಲ್ಲಿ ಬಿಡುಗಡೆಗೊಳಿಸಿದ ಬಳಿಕ ಈ ಬೆಳವಣಿಗೆಗಳು ನಡೆದಿವೆ. ಸಾಕ್ಷಚಿತ್ರವು ಭಾರತದಲ್ಲಿ ಬಿಡುಗಡೆಗೊಳ್ಳದಿದ್ದರೂ ಅದರ ನಕಲು ಪ್ರತಿಗಳು ಆನ್ಲೈನ್ನಲ್ಲಿ ವ್ಯಾಪಕವಾಗಿ ಹರಿದಾಡಿದ್ದವು.

ಪ್ರತಿಪಕ್ಷಗಳ ಟೀಕೆ

ಸಾಕ್ಷಚಿತ್ರಕ್ಕೆ ಸಂಬಂಧಿಸಿದಂತೆ ಬಿಬಿಸಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಮಂಗಳವಾರ ಪ್ರತಿಪಕ್ಷಗಳು ಸರಕಾರವನ್ನು ಟೀಕಿಸಿವೆ.

ಕಾಂಗ್ರೆಸ್ ‘ಸಮೀಕ್ಷೆ’ಯನ್ನು ‘ಅಘೋಷಿತ ತುರ್ತು ಸ್ಥಿತಿ’ಎಂದು ಬಣ್ಣಿಸಿದೆ. ‘ಇಲ್ಲಿ ನಾವು ಅದಾನಿ-ಹಿಂಡನ್ಬರ್ಗ್ ವಿವಾದದಲ್ಲಿ ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯನ್ನು ಕೋರುತ್ತಿದ್ದೇವೆ,ಅಲ್ಲಿ ಸರಕಾರವು ಬಿಬಿಸಿಯನ್ನು ಬೇಟೆಯಾಡುತ್ತಿದೆ’ ಎಂದು ಹೇಳಿದ ಕಾಂಗ್ರೆಸ್ ನಾಯಕ ಜೈರಾಮ ರಮೇಶ ಅವರು,‘ವಿನಾಶ ಕಾಲೇ ವಿಪರೀತ ಬುದ್ಧಿ’ಎಂದು ಕುಟುಕಿದರು.

ಸರಕಾರದ ಕ್ರಮಗಳ ಕಾರಣ ಮತ್ತು ಪರಿಣಾಮಗಳು ‘ಸಾಕಷ್ಟು ಸ್ಪಷ್ಟವಾಗಿವೆ ’ ಎಂದು ಹೇಳಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರು,ಪ್ರತಿಪಕ್ಷ ನಾಯಕರಾಗಿರಲಿ, ಮಾಧ್ಯಮಗಳು, ಸಾಮಾಜಿಕ ಕಾರ್ಯಕರ್ತರು ಅಥವಾ ಇತರ ಯಾರೇ ಆಗಿರಲಿ. ಭಾರತ ಸರಕಾರವು ಸತ್ಯ ಹೇಳುವವರನ್ನು ಬೇಟೆಯಾಡುತ್ತಿದೆ. ಸತ್ಯಕ್ಕಾಗಿ ಹೋರಾಡುವವರು ಅದಕ್ಕಾಗಿ ಬೆಲೆ ತೆರಬೇಕಿದೆ ಎಂದರು.

ಬಿಬಿಸಿ ಸಾಕ್ಷಚಿತ್ರ

‘ದಿ ಮೋದಿ ಕ್ವೆಶ್ಚನ್’ ಶೀರ್ಷಿಕೆಯ ಸಾಕ್ಷಚಿತ್ರದ ಮೊದಲ ಭಾಗವು ಜ.17ರಂದು ಬಿಡುಗಡೆಗೊಂಡಿತ್ತು. ಬ್ರಿಟಿಷ್ ಸರಕಾರವು ಕಳುಹಿಸಿದ್ದ ತಂಡವು ದಂಗೆಗಳ ಸಂದರ್ಭದಲ್ಲಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಮೋದಿಯವರು ಮುಸ್ಲಿಮರ ವಿರುದ್ಧ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿದ್ದ ‘ನಿರ್ಭೀತಿಯ ವಾತಾವರಣಕ್ಕೆ ನೇರವಾಗಿ ಹೊಣೆಗಾರರಾಗಿದ್ದರು ’ಎಂದು ಬೆಟ್ಟು ಮಾಡಿತ್ತು.

ಬಿಜೆಪಿ ಸರಕಾರವು ಪ್ರಜಾಪ್ರಭುತ್ವವನ್ನು ನಾಶಗೊಳಿಸುತ್ತಿದೆ. ಬಿಜೆಪಿ ಸರಕಾರದ ಅಥವಾ ಅದರ ನಾಯಕರ ದಬ್ಬಾಳಿಕೆಯ ವಿರುದ್ಧ ಮಾತನಾಡುವ ಪ್ರತಿಯೊಂದೂ ಧ್ವನಿಯನ್ನು ಅಡಗಿಸಲು ಅದು ಬಯಸಿದೆಯೇ? ಸಮಯ ಮತ್ತು ಅಧಿಕಾರ ಬದಲಾಗುತ್ತಿರುತ್ತದೆ,ಆದರೆ ಪ್ರಜಾಪ್ರಭುತ್ವವು ಶಾಶ್ವತವಾಗಿರುತ್ತದೆ ಎನ್ನುವುದನ್ನು ಸರಕಾರವು ನೆನಪಿಟ್ಟುಕೊಳ್ಳಬೇಕು.

-ಸಮಾಜವಾದಿ ಪಾರ್ಟಿ

share
Next Story
X