Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಸಂಸ್ಥೆಯ ಬಗ್ಗೆ ಬಿಜೆಪಿಗೆ...

ಅದಾನಿ ಸಂಸ್ಥೆಯ ಬಗ್ಗೆ ಬಿಜೆಪಿಗೆ ಮರೆಮಾಚಲು, ಭಯಪಡಲು ಏನೂ ಇಲ್ಲ: ಅಮಿತ್ ಶಾ

14 Feb 2023 3:16 PM IST
share
ಅದಾನಿ ಸಂಸ್ಥೆಯ ಬಗ್ಗೆ ಬಿಜೆಪಿಗೆ ಮರೆಮಾಚಲು, ಭಯಪಡಲು ಏನೂ ಇಲ್ಲ: ಅಮಿತ್ ಶಾ

ಅಗರ್ತಲಾ, ಫೆ.14: ಅದಾನಿ-ಹಿಂಡನ್ಬರ್ಗ್ ವಿವಾದ ಕುರಿತು ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಸರ್ವೋಚ್ಚ ನ್ಯಾಯಾಲಯವು ವಿಷಯವನ್ನು ತನ್ನ ಗಮನಕ್ಕೆ ತೆಗೆದುಕೊಂಡಿದೆ, ಹೀಗಿರುವಾಗ ಓರ್ವ ಸಚಿವನಾಗಿ ತಾನು ಈ ವಿಷಯದಲ್ಲಿ ಹೇಳಿಕೆ ನೀಡುವುದು ಸೂಕ್ತವಾಗುವುದಿಲ್ಲ. ಆದರೆ ಈ ವಿಷಯದಲ್ಲಿ ಬಿಜೆಪಿಗೆ ಮುಚ್ಚಿಡಲು ಅಥವಾ ಭಯ ಪಡಲು ಏನೂ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮುಚ್ಚಿಡಲು ಏನೂ ಇಲ್ಲದಿದ್ದರೆ ಜೆಪಿಸಿ ತನಿಖೆಗೆ ಸರಕಾರವು ಹಿಂಜರಿಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ.

ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ,ಇತ್ತೀಚಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾಷಣದ ಕುರಿತು ಪ್ರಶ್ನೆಗೆ ಶಾ, ತಾನು ಏನನ್ನು ಮಾತನಾಡಬೇಕು ಎನ್ನುವುದನ್ನು ನಿರ್ಧರಿಸುವುದು ಅವರಿಗೆ ಅಥವಾ ಅವರ ಭಾಷಣವನ್ನು ಸಿದ್ಧಪಡಿಸುವವರಿಗೆ ಬಿಟ್ಟ ವಿಷಯವಾಗಿದೆ ಎಂದು ಉತ್ತರಿಸಿದರು. ರಾಹುಲ್ ಭಾಷಣ ಹೆಚ್ಚುಕಡಿಮೆ ಸಂಪೂರ್ಣವಾಗಿ ಅದಾನಿ ಗ್ರೂಪ್ಗೆ ಸಂಬಂಧಿಸಿತ್ತು.

ಬಿಜೆಪಿ ಬಂಡವಾಳಶಾಹಿಗಳ ಪರವಾಗಿದೆ ಎಂಬ ರಾಹುಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾ,ಪ್ರಶ್ನೆಯೇ ಇಲ್ಲ. ಬಿಜೆಪಿ ವಿರುದ್ಧ ಇಂತಹ ಆರೋಪವನ್ನು ಹೊರಿಸಲು ಈವರೆಗೆ ಯಾರಿಗೂ ಸಾಧ್ಯವಾಗಿಲ್ಲ. ಕಾಂಗ್ರೆಸ್ ಆಡಳಿತದ ಕಾಲದಲ್ಲಿ,ಅದು ಸಿಎಜಿ ಅಥವಾ ಸಿಬಿಐ ಆಗಿರಲಿ,ತನಿಖಾ ಸಂಸ್ಥೆಗಳು ಭ್ರಷ್ಟಾಚಾರವನ್ನು ಗಮನಕ್ಕೆ ತೆಗೆದುಕೊಂಡು ಪ್ರಕರಣಗಳನ್ನು ದಾಖಲಿಸಿದ್ದವು. ಆಗ 12 ಲ.ಕೋ.ರೂ.ಗಳ ಹಗರಣಗಳು ನಡೆದಿದ್ದವು ಎಂದರು.

ಬಿಜೆಪಿಯು ‘ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ’ಎಂಬ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಆರೋಪಗಳ ಕುರಿತು ಪ್ರಶ್ನೆಗೆ ಶಾ,ನ್ಯಾಯಾಲಯಗಳು ಬಿಜೆಪಿಯ ಪ್ರಭಾವದಡಿ ಇಲ್ಲ ಎನ್ನುವುದನ್ನು ಅವರು ಗಮನಿಸಬೇಕು ಮತ್ತು ನ್ಯಾಯಾಲಯಗಳಿಗೆ ಹೋಗಬೇಕು ಎಂದು ಉತ್ತರಿಸಿದರು. ‘ಕೋರ್ಟ್ ಹಮಾರೆ ಕಬ್ಜೆ ಮೆ ನಹೀ ಹೈ ’ಎಂದರು.

ಹಿಂಡನ್ಬಗ್ ವರದಿ ಮತ್ತು ಬಿಬಿಸಿ ಸಾಕ್ಷಚಿತ್ರದ ಹಿನ್ನೆಲೆಯಲ್ಲಿ ಪಿತೂರಿ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಾ,ಸಾವಿರಾರು ಪಿತೂರಿಗಳು ಸತ್ಯಕ್ಕೆ ಹಾನಿಯನ್ನುಂಟು ಮಾಡಲು ಸಾಧ್ಯವಿಲ್ಲ. ಸತ್ಯವು ಸೂರ್ಯನಂತೆ ಉಜ್ವಲವಾಗಿ ಪ್ರಕಾಶಿಸುತ್ತದೆ. ಅವರು 2002ರಿಂದಲೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಇದನ್ನೇ ಮಾಡಿಕೊಂಡು ಬಂದಿದ್ದಾರೆ ಮತ್ತು ಮೋದಿ ಪ್ರತಿ ಬಾರಿಯೂ ಹೆಚ್ಚಿನ ಜನಪ್ರಿಯತೆಯನ್ನು ಗಳಿಸುವ ಮೂಲಕ ಪ್ರಬಲವಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.

ಜೆಪಿಸಿ ತನಿಖೆಗೆ ಏಕೆ ಹಿಂಜರಿಕೆ?: ಕಾಂಗ್ರೆಸ್

ಅದಾನಿ-ಹಿಂಡನ್ಬರ್ಗ್ ವಿಷಯದಲ್ಲಿ ಜೆಪಿಸಿ ತನಿಖೆ ನಡೆಸಲು ಕೇಂದ್ರವು ಹಿಂಜರಿಯುತ್ತಿದೆ ಎಂದು ಮಂಗಳವಾರ ಆರೋಪಿಸಿರುವ ಕಾಂಗ್ರೆಸ್,ಈ ವಿಷಯದಲ್ಲಿ ಸರಕಾರಕ್ಕೆ ಮುಚ್ಚಿಡಲು ಏನೂ ಇಲ್ಲದಿದ್ದರೆ ಜೆಪಿಸಿ ತನಿಖೆಗೆ ಅವಕಾಶ ನೀಡಬೇಕು ಎಂದು ಹೇಳಿದೆ.

ಇಲ್ಲಿಯ ಕಾಂಗ್ರೆಸ್ ಕೇಂದ್ರಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಅವರು,ಅದಾನಿ ವಿಷಯದಲ್ಲಿ ನಿಷ್ಪಕ್ಷ ತನಿಖೆಯನ್ನು ಕೋರಿ ತಾನು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಅವರಿಗೆ ಪತ್ರಗಳನ್ನು ಬರೆದಿರುವುದಾಗಿ ತಿಳಿಸಿದರು.

ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ರಮೇಶ,ಅವರಿಗೆ ಮುಚ್ಚಿಡಲು ಏನೂ ಇಲ್ಲದಿದ್ದರೆ ಜೆಪಿಸಿ ತನಿಖೆಗೇಕೆ ಹಿಂಜರಿಯುತ್ತಿದ್ದಾರೆ ಎಂದು ಪ್ರಶ್ನಿಸಿದರು.
‘ಸಂಸತ್ತಿನಲ್ಲಿ ಜೆಪಿಸಿ ತನಿಖೆಗಾಗಿ ಬೇಡಿಕೆಯನ್ನೆತ್ತಲೂ ಅವರು ನಮಗೆ ಅವಕಾಶ ನೀಡುತ್ತಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಮ್ಮ ನಾಯಕರು ಈ ಬೇಡಿಕೆಯನ್ನೆತ್ತಿದಾಗ ಅವರ ಹೇಳಿಕೆಗಳನ್ನು ಅಳಿಸಲಾಗಿದೆ ’ಎಂದ ರಮೇಶ,ಮುಚ್ಚಿಡಲು ಏನೂ ಇಲ್ಲದಿದ್ದರೆ ಸರಕಾರವು ಜೆಪಿಸಿ ತನಿಖೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಯು ಪ್ರಾಥಮಿಕವಾಗಿ ಹಿಂಡನ್ಬರ್ಗ್ ವರದಿಯ ವಿರುದ್ಧವಾಗಿದೆ ಎನ್ನುವುದನ್ನು ಗಮನಿಸುವುದು ಮುಖ್ಯವಾಗಿದೆ ಎಂದ ಅವರು, ಅದಾನಿ ಗ್ರೂಪ್ ಮತ್ತು ಸರಕಾರದೊಂದಿಗೆ ಅದರ ಸಂಬಂಧಗಳ ವಿರುದ್ಧವೂ ತನಿಖೆ ನಡೆಯಬೇಕು ಎಂದು ಹೇಳಿದರು. ಆದರೂ,ಕಾಂಗ್ರೆಸ್ ಖಾಸಗಿ ಹೂಡಿಕೆಗಳ ಪರವಾಗಿದೆ ಮತ್ತು ಅದನ್ನು ಉತ್ತೇಜಿಸುವ ಅಗತ್ಯವಿದೆ ಎಂದು ರಮೇಶ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಉದಾರೀಕರಣದ ಪರವಾಗಿದೆ, ಆದರೆ ಇದು ನಿಯಮಗಳು ಮತ್ತು ಸ್ವತಂತ್ರವಾಗಿ ಕಾರ್ಯಾಚರಿಸುವ ಸಂಸ್ಥೆಗಳ ಆಧಾರದಲ್ಲಿ ನಡೆಯಬೇಕು. ನಿಯಮಗಳನ್ನು ನಿಷ್ಪಕ್ಷ ಮತ್ತು ಪಾರದರ್ಶಕ ರೀತಿಯಲ್ಲಿ ಅನ್ವಯಿಸುವಂತಿರಬೇಕು ಎಂದ ರಮೇಶ, ‘ನಮ್ಮ ಹೋರಾಟವು ಕ್ರೋನಿ ಕ್ಯಾಪಿಟಲಿಸಂ ವಿರುದ್ಧವಾಗಿದೆ. ನಮ್ಮನ್ನು ಹತಾಶರನ್ನಾಗಿಸಲು ಸಾಧ್ಯವಿಲ್ಲ,ನಾವು ನಮ್ಮ ಧ್ವನಿಯನ್ನು ಎತ್ತುತ್ತಲೇ ಇರುತ್ತೇವೆ ’ಎಂದರು.

‘ಅವರೇಕೆ ನ್ಯಾಯಾಲಯಗಳಿಗೆ ಹೋಗುತ್ತಿಲ್ಲ? ಪೆಗಾಸಸ್ ವಿಷಯವನ್ನು ಎತ್ತಿದಾಗಲೂ ಪುರಾವೆಗಳೊಂದಿಗೆ ನ್ಯಾಯಾಲಯಕ್ಕೆ ಹೋಗಿ ಎಂದು ನಾನು ಹೇಳಿದ್ದೆ. ಗದ್ದಲವನ್ನು ಸೃಷ್ಟಿಸುವುದು ಮಾತ್ರ ಅವರಿಗೆ ಗೊತ್ತು. ಕೆಲವರು ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಿದ್ದರು,ನ್ಯಾಯಾಲಯವು ಪೆಗಾಸಸ್ ಅನ್ನು ಗಮನಕ್ಕೆ ತೆಗೆದುಕೊಂಡಿತ್ತು ಮತ್ತು ತನ್ನ ತೀರ್ಪನ್ನು ನೀಡಿತ್ತು. ತನಿಖೆಯನ್ನೂ ನಡೆಸಲಾಗಿತ್ತು. 

-ಅಮಿತ್ ಶಾ

‘ನಾವು ಉದ್ಯಮಶೀಲತೆಯ ಪರವಾಗಿದ್ದೇವೆ ಮತ್ತು ಅದು ಆರ್ಥಿಕ ಅಭಿವೃದ್ಧಿಗೆ ಮುಂದಿನ ದಾರಿಯಾಗಿದೆ ಎಂದು ನಾವು ಯಾವಾಗಲೂ ಹೇಳುತ್ತಿದ್ದೇವೆ. ನಾವು ಕುರುಡು ಖಾಸಗೀಕರಣ ಮತ್ತು ಪಿಎಸ್ಯುಗಳ ಮಾರಾಟದ ವಿರುದ್ಧವಾಗಿದ್ದೇವೆ.

-ಜೈರಾಮ್ ರಮೇಶ್

share
Next Story
X