Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ಕನ್ನಡ ಭಾಷಾ ಅಕಾಡೆಮಿ...

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ವಿ.ಪರಿಷತ್ತಿನಲ್ಲಿ ಮಂಜುನಾಥ ಭಂಡಾರಿ ಒತ್ತಾಯ

14 Feb 2023 8:04 PM IST
share
ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ವಿ.ಪರಿಷತ್ತಿನಲ್ಲಿ ಮಂಜುನಾಥ ಭಂಡಾರಿ ಒತ್ತಾಯ

ಉಡುಪಿ: ಭಾಷೆ ಹಾಗೂ ಸಂಸ್ಕೃತಿ ವಿಚಾರದಲ್ಲಿ ತನ್ನದೇ ಆದ ವೈಶಿಷ್ಟ ಹೊಂದಿರುವ ಕುಂದಾಪುರ ಭಾಗದ ಜನರು ಆಡುವ ಕುಂದಾಪ್ರ ಕನ್ನಡಕ್ಕಾಗಿ ಪ್ರತ್ಯೇಕವಾದ ಕುಂದಾಪುರ ಕನ್ನಡ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವಂತೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇಂದು ಸರಕಾರವನ್ನು ಒತ್ತಾಯಿಸಿದರು.

ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಭಂಡಾರಿ, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವ ಕುರಿತು ಸರಕಾರದ ಗಮನ ಸೆಳೆದರು.

ಕುಂದಾಪುರ ಕರ್ನಾಟಕಕ್ಕೆ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತವಾದ ಕೊಡುಗೆ ನೀಡಿದ ಊರು. ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದ ತನಕ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು ಹಾಗೂ ಕರಾವಳಿಯ 300ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದಾರೆ ಎಂದವರು ವಿವರಿಸಿದ್ದಾರೆ.

ಈ ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕಾ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆಯ ಸೊಬಗು ಕಾಣಸಿಗುತ್ತದೆ. ತಾಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದರು.

ಕಳೆದ ಒಂದು ಶತಮಾನದಲ್ಲಿ ಕುಂದಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟ್ರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ. ಇಂದು ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹುಸಮುದಾಯದ  ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇಅಕಾಡು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದವರು ಪ್ರತಿಪಾದಿಸಿದರು.

ಆದ್ದರಿಂದ  25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡೆಮಿ’ ಸ್ಥಾಪಿಸಬೇಕೆಂದು ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಹಾಗೂ ಸರಕಾರವನ್ನು ಒತ್ತಾಯಸಿದರು.

share
Next Story
X