ಕಂಠೀರವ ಕ್ರೀಡಾಂಗಣ ಆಧುನೀಕರಣ: ಸಚಿವ ಡಾ. ನಾರಾಯಣಗೌಡ

ಬೆಂಗಳೂರು, ಫೆ, 14: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಯನ್ನು ಸುಮಾರು 5.64 ಕೋಟಿ ರೂ.ವೆಚ್ಚದಲ್ಲಿ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಮಂಗಳವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ಕ್ರೀಡಾಂಗಣ ಮೇಲ್ಛಾವಣಿಯ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಅವರಿಂದ ತಾಂತ್ರಿಕ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಕ್ರೀಡಾಂಗಣದ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದ್ದು, ಪ್ರತಿದಿನ 192 ಯೂನಿಟ್ ವಿದ್ಯುತ್ ಉತ್ಪಾದನೆ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಮೇಲ್ಛಾವಣಿಯ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಕೆಲವು ಭಾಗಗಳಲ್ಲಿ ಅರಳಿ ಗಿಡಗಳು ಹುಟ್ಟಿಕೊಂಡು ಕಟ್ಟಡಕ್ಕೆ ಧಕ್ಕೆಯಾಗುವ ಸಾಧ್ಯತೆ ಇತ್ತು. ಅಲ್ಲದೆ ಮಳೆ ಬಂದ ಸಂದರ್ಭದಲ್ಲಿ ನೀರು ಸೋರಿ ಅಸ್ತವ್ಯಸ್ತವಾಗುತ್ತಿತ್ತು. ಇದನ್ನು ಮನಗಂಡು ಕೂಡಲೇ ದುರಸ್ತಿಗೊಳಿಸುವಂತೆ ಸೂಚಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಶ್ರೀಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ.
— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) February 14, 2023
ಕ್ರೀಡಾಂಗಣ ಮೇಲ್ಛಾವಣಿಯಲ್ಲಿ ನೀರು ಸೋರಿಕೆ ಆಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ತಾಂತ್ರಿಕ ಸಲಹೆ ಪಡೆದು, 5.64 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿ ಟಿಪಿಒ ಮೆಂಬ್ರೇನ್ ಹಾಕಿಸಲಾಗಿದೆ.
1/2 pic.twitter.com/0qRTGLnB24







