Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.18-19 ರಂದು 'ಮಂಗಳೂರು ಲಿಟ್...

ಫೆ.18-19 ರಂದು 'ಮಂಗಳೂರು ಲಿಟ್ ಫೆಸ್ಟ್‌'

14 Feb 2023 11:46 PM IST
share

ಮಂಗಳೂರು: ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟ‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಮಂಗಳೂರು ಲಿಟ್ ಫೆಸ್ಟ್ನ ಐದನೇ ಆವೃತ್ತಿಯು ದಿ ಐಡಿಯಾ ಆಫ್ ಭಾರತ್ ('The Idea of Bharath')ಎಂಬ ಥೀಮ್‌ನಡಿಯಲ್ಲಿ ಜರುಗಲಿದೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಲಿಟ್ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷರಾದ ತುಕಾರಾಮ್ ಪೂಜಾರಿ ಇವರಿಗೆ ಈ ಬಾರಿಯ ಪ್ರಶಸ್ತಿ ನಿಡಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ  ಲೇಖಕರೊಂದಿಗೆ ಸಂವಾದ - (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ. ಅಮೃತ ಕಾಲದಲ್ಲಿ ಭಾರತದ ಬಗೆಗಿನ ಚಿಂತನೆ-ಪರಿಕಲ್ಪನೆಯ ಅಡಿ ಲಿಟ್ ಫೆಸ್ಟ್ ಜರುಗಲಿದ್ದು, ಆರ್. ಜಗನಾಥ್‌, ವಿನಯ್ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗಿಯಾಗಲಿದ್ದಾರೆ.

ರಿಷಬ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್‌, ಶಿವ್ ಅರೂ‌ರ್, ಅಜಿತ್ ಹನಮಕ್ಕನವರ್, ಅಡ್ಡಂಡ ಕಾರ್ಯಪ್ಪ, ಬಾಸುಮ ಕೊಡಗು, ದಕ್ಕುಲ ಮುನಿಸ್ವಾಮಿ ಸೇರಿದಂತೆ ಅನೇಕ ವಾಗ್ಮಿಗಳು, ಸಾಹಿತಿಗಳು, ಸಂಸೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ. (ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಈ ಲಿಂಕ್‌ನಲ್ಲಿ-https://mirlitfest.org/event-schedule-2023/ ಪಡೆಯಬಹುದು) ಎಂದು ಸುನಿಲ್ ಕುಲಕರ್ಣಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ಬ್ರಿಜೇಶ್ ಚೌಟ (ಟ್ರಸ್ಟಿ)ಶ್ರೀ ಧರ್ ಗುಡಿ,‌ ಸಂಜಯ ಪ್ರಭು, ಸುಚಿತ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು

share
Next Story
X