Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರೈತರ ಆತ್ಮಹತ್ಯೆ: ಕರ್ನಾಟಕಕ್ಕೆ 2ನೇ...

ರೈತರ ಆತ್ಮಹತ್ಯೆ: ಕರ್ನಾಟಕಕ್ಕೆ 2ನೇ ಸ್ಥಾನ

ಮೂರು ವರ್ಷಗಳಲ್ಲಿ 3,573 ಮಂದಿ ರೈತರು ಆತ್ಮಹತ್ಯೆ

ಜಿ.ಮಹಾಂತೇಶ್ಜಿ.ಮಹಾಂತೇಶ್15 Feb 2023 8:44 AM IST
share
ರೈತರ ಆತ್ಮಹತ್ಯೆ: ಕರ್ನಾಟಕಕ್ಕೆ 2ನೇ ಸ್ಥಾನ
ಮೂರು ವರ್ಷಗಳಲ್ಲಿ 3,573 ಮಂದಿ ರೈತರು ಆತ್ಮಹತ್ಯೆ

ಬೆಂಗಳೂರು, ಫೆ.14: ಪಿಎಂ ಕಿಸಾನ್, ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ಮತ್ತು  ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 3,573 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಟ್ಟು ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಒಟ್ಟು ರೈತರ ಪೈಕಿ ಕಳೆದ ಮೂರು ವರ್ಷಗಳಲ್ಲಿ ಕೇವಲ  462 ರೈತರಿಗೆ ಮಾತ್ರ ಪರಿಹಾರ ಒದಗಿಸಿದೆ.  ಬಿಹಾರ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಶೂನ್ಯ  ವರದಿಯಾಗಿದೆ.

ರಾಜ್ಯಸಭೆ ಸದಸ್ಯ ಅನಿಲ್ ದೇಸಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು 2023ರ ಫೆ.10ರಂದು ಅಂಕಿ ಅಂಶಗಳನ್ನು ಒದಗಿಸಿದೆ.

ಕೌಟುಂಬಿಕ ಕಾರಣ, ಅನಾರೋಗ್ಯ, ಮಾದಕ, ಕುಡಿತ, ವೈವಾಹಿಕ, ಪ್ರೇಮ ಪ್ರಕರಣ, ದಿವಾಳಿ, ನಿರುದ್ಯೋಗ, ಪರೀಕ್ಷೆಯಲ್ಲಿ ಅನುತ್ತೀರ್ಣ, ಬಡತನ ಮತ್ತು ವೃತ್ತಿಯಲ್ಲಿ ಏರಿಳಿತಗಳು ರೈತರ ಆತ್ಮಹತ್ಯೆಗೆ ಕಾರಣ ಎಂದು ಎಡಿಎಸ್‌ಐ ವರದಿಯನ್ನಾಧರಿಸಿ  ಕೇಂದ್ರ ಕೃಷಿ ಸಚಿವಾಲಯವು ಅಂಕಿ ಅಂಶಗಳನ್ನು ರಾಜ್ಯಸಭೆಗೆ ಮಂಡಿಸಿದೆ.

2019ರಲ್ಲಿ  ಪಿಎಂ ಕಿಸಾನ್ ಯೋಜನೆ  ಜಾರಿಗೊಂಡಿದ್ದ ವರ್ಷದಲ್ಲೇ ದೇಶದಾದ್ಯಂತ 5,957 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯಸಭೆಗೆ ಮಂಡಿಸಿರುವ ಉತ್ತರದಿಂದ ತಿಳಿದು ಬಂದಿದೆ.

ರೈತರ ಆದಾಯ ಬೆಂಬಲಿಸಲು ಪಿಎಂ ಕಿಸಾನ್ ಯೋಜನೆಯ ಅನ್ವಯ  ಪ್ರತೀ ರೈತನಿಗೆ ಪ್ರತೀ ವರ್ಷ 6,000 ರೂ.ನಂತೆ ಒಟ್ಟು ಮೂರು ಕಂತುಗಳಲ್ಲಿ ನೀಡಲಾಗಿದೆ. ದೇಶದ ಒಟ್ಟು 11 ಕೋಟಿ ರೈತರಿಗೆ 2.24 ಲಕ್ಷ ಕೋಟಿ ರೂ.ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದೆ.

ರಾಜ್ಯಸಭೆಗೆ ಮಂಡಿಸಲಾಗಿರುವ ಅಂಕಿ ಅಂಶದ  ಉತ್ತರದ ಪ್ರಕಾರ ಕರ್ನಾಟಕದಲ್ಲಿ 2019ರಲ್ಲಿ 1,331, 2020ರಲ್ಲಿ 1,072, 2021ರಲ್ಲಿ 1,170 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಕರ್ನಾಟಕ ಸರಕಾರದ ಕೃಷಿ ಇಲಾಖೆಯು ರಾಜ್ಯಸಭೆಗೆ ನೀಡಿರುವ ಉತ್ತರದ ಪ್ರಕಾರ 2019-20ರಲ್ಲಿ 1,091, 2020-21ರಲ್ಲಿ 855, 2021-22ರಲ್ಲಿ 915 ರೈತರು ಸೇರಿದಂತೆ ಒಟ್ಟಾರೆ 2,861 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇಂದ್ರ ಕೃಷಿ ಇಲಾಖೆಯು 2019, 2020 ಮತ್ತು 2021ರ ಅಂಕಿ ಅಂಶಗಳನ್ನಷ್ಟೇ ರಾಜ್ಯಸಭೆಗೆ ನೀಡಿದೆ. ಕರ್ನಾಟಕದ ಕೃಷಿ ಇಲಾಖೆಯು 2019-20, 2020-21, 2021-22ರ ಅಂಕಿ ಅಂಶಗಳನ್ನು ಒದಗಿಸಿದೆ.

ಕರ್ನಾಟಕ ಸರಕಾರದ ಕೃಷಿ ಇಲಾಖೆಯು ನೀಡಿರುವ ಉತ್ತರದ ಪ್ರಕಾರ 2019-20ರಿಂದ 2021-22ರಲ್ಲಿ ಒಟ್ಟು 2,861 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿಗಳ ಪೈಕಿ 2,377 ರೈತರ ಆತ್ಮಹತ್ಯೆಗಳನ್ನಷ್ಟೇ ಒಪ್ಪಿಕೊಂಡಿದೆ. ಈ ಪೈಕಿ ಕೇವಲ 462 ರೈತರಿಗೆ ಮಾತ್ರ ಪರಿಹಾರ ಒದಗಿಸಿದೆ. 462 ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಿರಸ್ಕರಿಸಿದೆ. ಇನ್ನು 22 ಪ್ರಕರಣಗಳು ನಿರ್ಧರಿಸಲು ಬಾಕಿ ಇರಿಸಿಕೊಂಡಿರುವುದು ತಿಳಿದು ಬಂದಿದೆ. ಕರ್ನಾಟಕ ಸರಕಾರದ ಕೃಷಿ ಇಲಾಖೆಯು ರಾಜ್ಯಸಭೆಗೆ ನೀಡಿರುವ ಉತ್ತರದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ತ್ರಿಪುರ, ಜಾರ್ಖಂಡ್, ಬಿಹಾರ, ಒಡಿಶಾ, ಗೋವಾ, ಉತ್ತರಾಖಂಡ, ದಿಲ್ಲಿ, ಲಕ್ಷದ್ವೀಪ, ಪುದುಚೇರಿಯಲ್ಲಿ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಮಹಾರಾಷ್ಟ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 7,887 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಆಂಧ್ರಪ್ರದೇಶದಲ್ಲಿ 1,673, ಅಸ್ಸಾಂನಲ್ಲಿ 191, ಛತ್ತೀಸ್‌ಗಡದಲ್ಲಿ 531, ಗುಜರಾತ್ 8, ಹಿಮಾಚಲಪ್ರದೇಶದಲ್ಲಿ 31, ಕೇರಳದಲ್ಲಿ 113, ಮಧ್ಯಪ್ರದೇಶದಲ್ಲಿ 494, ಮಣಿಪುರದಲ್ಲಿ 1, ಮೇಘಾಲಯದಲ್ಲಿ 7, ಮಿರೆರಾಂನಲ್ಲಿ 26, ನಾಗಾಲ್ಯಾಂಡ್‌ನಲ್ಲಿ 1, ಪಂಜಾಬ್‌ನಲ್ಲಿ 584, ರಾಜಸ್ಥಾನದಲ್ಲಿ 2, ಸಿಕ್ಕಿಂನಲ್ಲಿ 14, ತಮಿಳುನಾಡಿನಲ್ಲಿ 146, ತೆಲಂಗಾಣದಲ್ಲಿ 1,309, ಉತ್ತರ ಪ್ರದೇಶದಲ್ಲಿ 208, ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ 13, ಜಮ್ಮು-ಕಾಶ್ಮೀರದಲ್ಲಿ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಉತ್ತರದಿಂದ ತಿಳಿದು ಬಂದಿದೆ.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಕಳೆದ 6 ವರ್ಷಗಳಲ್ಲಿ  38 ಕೋಟಿ ರೈತರು ಅರ್ಜಿ ಸಲ್ಲಿಸಿದ್ದರು. 1,30,015 ಕೋಟಿ ಕ್ಲೈಮ್‌ಗಳ ಪೈಕಿ 25,252 ಕೋಟಿ ರೂ.ಗಳನ್ನು ರೈತರಿಗೆ ನೀಡಲಾಗಿದೆ ಎಂದು ಮಾಹಿತಿ ಒದಗಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X