Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ CJI ರಂಜನ್ ಗೊಗೊಯಿಯಿಂದ...

ಮಾಜಿ CJI ರಂಜನ್ ಗೊಗೊಯಿಯಿಂದ ರಾಜ್ಯಸಭೆಯಲ್ಲಿ ಚಟುವಟಿಕೆ ಕೊರತೆ, ಕಳಪೆ ಹಾಜರಾತಿ: ವರದಿ

15 Feb 2023 12:26 PM IST
share
ಮಾಜಿ CJI ರಂಜನ್ ಗೊಗೊಯಿಯಿಂದ ರಾಜ್ಯಸಭೆಯಲ್ಲಿ ಚಟುವಟಿಕೆ ಕೊರತೆ, ಕಳಪೆ ಹಾಜರಾತಿ: ವರದಿ

ಹೊಸದಿಲ್ಲಿ:  ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ನಂತರ ರಾಜ್ಯಸಭೆ ಸದಸ್ಯರಾಗಿ ನೇಮಕಗೊಂಡಿರುವ ನ್ಯಾ. ರಂಜನ್ ಗೊಗೊಯಿ, ಈವರೆಗೆ ರಾಜ್ಯಸಭೆಯಲ್ಲಿ ಶೂನ್ಯ ಪ್ರಶ್ನೆ ಕೇಳಿದ್ದಾರೆ ಎಂಬ ಸಂಗತಿ ರಾಜ್ಯಸಭೆಯ ಅಧಿಕೃತ ಅಂತರ್ಜಾಲದಲ್ಲಿನ ದತ್ತಾಂಶದಿಂದ ಬಹಿರಂಗಗೊಂಡಿದೆ. ಅಲ್ಲದೆ ಈವರೆಗೆ ಅವರು ಯಾವುದೇ ಖಾಸಗಿ ಮಸೂದೆಯನ್ನು ಮಂಡಿಸಿಲ್ಲ. ಅಂತರ್ಜಾಲ ತಾಣದ "My Participation" ವಿಭಾಗದಲ್ಲಿ ರಂಜನ್ ಗೊಗೊಯಿ ಅವರ ಯಾವುದೇ ಧ್ವನಿಮುದ್ರಿಕೆ ಅಥವಾ ದೃಶ್ಯಕ್ಕೆ ಹುಡುಕಾಟ ನಡೆಸಿದರೆ, "ಯಾವುದೇ ದಾಖಲೆ ದೊರೆಯುವುದಿಲ್ಲ" ಎಂದು ಪ್ರದರ್ಶನವಾಗುತ್ತಿದೆ ಎಂದು indianexpress.com ವರದಿ ಮಾಡಿದೆ.

ಇದರೊಂದಿಗೆ, ರಂಜನ್ ಗೊಗೊಯಿ ಅವರ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ ಎಂಬ ಸಂಗತಿಯನ್ನು ಅಂತರ್ಜಾಲ ತಾಣ ಪ್ರದರ್ಶಿಸುತ್ತಿದೆ. ಈ ಕುರಿತು ಶೋಧನೆ ನಡೆಸಿರುವ ಪಿಆರ್‌ಎಸ್ ಸಂಸದೀಯ ಸಂಶೋಧನಾ ಸಂಸ್ಥೆಯು, ರಂಜನ್ ಗೊಗೊಯಿ ಅವರ ಈವರೆಗಿನ ರಾಜ್ಯಸಭಾ ಹಾಜರಾತಿ ಶೇ. 30 ಮಾತ್ರ ಎಂಬ ಅಂಶವನ್ನು ಬಯಲು ಮಾಡಿದೆ. ಹೀಗಿದ್ದೂ, ಸಂಸತ್ತಿನಲ್ಲಿ ಸದಸ್ಯರು ಹಾಜರಾತಿ ಪುಸ್ತಕಕ್ಕೆ ಸಹಿ ಮಾಡುವ ಮೂಲಕ ಸದನಕ್ಕೆ ಹಾಜರಾಗುತ್ತಾರೆ. ಹೀಗಾಗಿ, ಸದಸ್ಯರು ಸದನಕ್ಕೆ ಹಾಜರಾದ ಯಾವುದಾದರೂ ದಿನ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡದಿರುವ ಸಾಧ್ಯತೆಯೂ ಇದೆ.

ಇದಕ್ಕೂ ಮುನ್ನ ನಿವೃತ್ತಿಯಾದ ನಾಲ್ಕು ತಿಂಗಳ ನಂತರ ಮಾರ್ಚ್ 19, 2020ರಂದು ನ್ಯಾ. ರಂಜನ್ ಗೊಗೊಯಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನ ರಾಜ್ಯಸಭೆಯಲ್ಲಿ ಭಾರಿ ಗದ್ದಲ ನಡೆದು, ವಿರೋಧ ಪಕ್ಷದ ನಾಯಕರು 'ನಾಚಿಕೆಗೇಡು' ಎಂದು ಘೋಷಣೆ ಕೂಗಿದ್ದರು. ಈ ಸಂದರ್ಭದಲ್ಲಿ ಅವರ ರಾಜ್ಯಸಭಾ ನಾಮಕರಣಕ್ಕೆ ಕೆಲವು ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರೂ ಆಕ್ಷೇಪ ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದ ನ್ಯಾ. ಅಬ್ದುಲ್ ನಝೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಅವರು ಅಯೋಧ್ಯೆ ವಿವಾದದ ಕುರಿತು ತೀರ್ಪು ನೀಡಿದ ಐವರು ಸದಸ್ಯರ ಸಾಂವಿಧಾನಿಕ ಪೀಠದ ಓರ್ವ ಸದಸ್ಯರಾಗಿದ್ದರು. ಅಬ್ದುಲ್ ನಝೀರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಿರುವ ಕ್ರಮವು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷಗಳೂ ಈ ಕ್ರಮವನ್ನು ಕಟುವಾಗಿ ಟೀಕಿಸಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, "ಈ ಕ್ರಮವು ತೀವ್ರ ಅಧಃಪತನಕಾರಿಯಾಗಿದ್ದು, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಗೆ ಭಾರಿ ಬೆದರಿಕೆಯಾಗಿದೆ" ಎಂದು ಆಕ್ಷೇಪಿಸಿತ್ತು.

share
Next Story
X