ಮೀನುಗಾರರ ಮೇಲಿನ ಹಲ್ಲೆಗೆ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಖಂಡನೆ

ಉಡುಪಿ: ಕರ್ನಾಟಕ ರಾಜ್ಯದ ಮೀನುಗಾರರ ಮೇಲೆ ಕನ್ಯಾಕುಮಾರಿಯಲ್ಲಿ ಅನ್ಯರಾಜ್ಯದ ಬೋಟಿನವರು ನಡೆಸಿರುವ ಹಲ್ಲೆಯನ್ನು ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಕರ್ನಾಟಕ ಬೋಟುಗಳನ್ನು ಸುತ್ತುವರಿದು ಸೀಸ, ಕಲ್ಲು, ಮರದ ತುಂಡುಗಳಿಂದ ಜಖಂಗೊಳಿಸಿ ಮೀನುಗಾರರ ಮೇಲೆ ಹಲ್ಲೆಗೈದು ಆಕ್ರಮಣ ಮಾಡಿ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ದೋಚಿ ಕಡಲುಗಳ್ಳತನ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಂದ ಮೀನುಗಾರರಿಗೆ ಆಗಿರುವ ನಷ್ಟವನ್ನು ಭರಿಸಿ ನಮ್ಮ ರಾಜ್ಯದ ಮೀನುಗಾರರಿಗೆ ನ್ಯಾಯ ಒದಗಿಸಿ ಸೂಕ್ತ ರಕ್ಷಣೆ ನೀಡಿ ಮೀನುಗಾರಿಕೆಯು ಸುಗಮವಾಗಿ ನಡೆಯಲು ಅವಕಾಶ ಮಾಡಿ ಕೊಡಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕಿಶೋರ್ ಡಿ ಸುವರ್ಣ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
Next Story





