ಪುತ್ತೂರು: ರಸ್ತೆ ಅಪಘಾತ; ಕಾರು ಚಾಲಕ ಮೃತ್ಯು

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರು ಎಂಬಲ್ಲಿ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಫೆ.14ರಂದು ರಾತ್ರಿ ನಡೆದಿದೆ.
ಪುತ್ತೂರು ತಾಲೂಕಿನ ನಿಡ್ಪಳ್ಳಿ ನಿವಾಸಿ ಮುರಳಿ ಕೃಷ್ಣ ಭಟ್ (35) ಮೃತರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು.
ಸಂಟ್ಯಾರು - ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಸುಮಾರು 50 ಅಡಿ ಆಳದ ತೋಟಕ್ಕೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ನಿವಾಸಿಗಳಾಗಿದ್ದ ದಿಲೀಪ್ ಕುಮಾರ್, ಶಶಿಕುಮಾರ್, ನವನೀತ್ ಹಾಗೂ ಮುರಳಿ ಮುಂಡೂರು ಅಲ್ಪ ಸ್ವಲ್ಪ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪುತ್ತೂರು ಡಿವೈಎಸ್ಪಿ ವೀರಯ್ಯ ಹೀರೆಮಠ್ ಅಪಘಾತದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story





