ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತಾ ವಿರುದ್ಧ ಕೋರ್ಟ್ ನಿಂದ ಜಾಮೀನು ರಹಿತ ವಾರಂಟ್

ಬೆಂಗಳೂರು, ಫೆ.15: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್‌ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
ಈ ಕುರಿತ ಪ್ರಕರಣವನ್ನು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆಗೆ ಗೈರು ಹಾಜರಾಗಿದ್ದ ದತ್ತಾ ಅವರಿಗೆ ನ್ಯಾಯಾಧೀಶ ಜೆ.ಪ್ರೀತ್ ಅವರು, ಜಾಮೀನು ರಹಿತ ವಾರಂಟ್ ಹೊರಡಿಸಿ ಆದೇಶಿಸಿದರು.
ದತ್ತಾ ವಿರುದ್ಧ ಸಿ.ಎಸ್.ಸೋಮೇಗೌಡ ಎಂಬವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಮಾ.27ಕ್ಕೆ ವೈಎಸ್ ವಿ ದತ್ತಾ ಅವರನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದೆ.
Next Story





