ಮಣಿಪಾಲ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಟಾರಸಿನಿಂದ ಬಿದ್ದು ಮೃತ್ಯು

ಮಣಿಪಾಲ, ಫೆ.15: ವೈಯಕ್ತಿಕ ಕಾರಣದಿಂದ ಮನನೊಂದ ಕೊಡಗು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ವಸತಿ ಸಮುಚ್ಛಯದಲ್ಲಿ ಫೆ.14ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ಗೌರಿ (70) ಎಂದು ಗುರುತಿಸಲಾಗಿದೆ.
ಇವರು ಫ್ಲ್ಯಾಟ್‌ನಲ್ಲಿ ಮನೆ ಕೆಲಸ ಮಾಡಿಕೊಂಡಿದ್ದು, ಇವರ ನಾಲ್ಕು ಮಕ್ಕಳಲ್ಲಿ ಇಬ್ಬರು ಮಕ್ಕಳು ಮತ್ತು ಪತಿ ಮೃತಪಟ್ಟಿದ್ದಾರೆ. ತನಗೆ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡ ಇವರು ಟೇರಸ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದ್ದು, ಈ ವೇಳೆ ಸೀರೆ ತುಂಡಾಗಿ ಮಹಿಳೆ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





