ಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ವರ್ಗಾವಣೆ

ಉಡುಪಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಉಡುಪಿ ಪೌರಾಯುಕ್ತ ಡಾ.ಉದಯ ಶೆಟ್ಟಿ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಗೆ ಪೌರಾಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಉಡುಪಿ ನಗರಸಭೆ ಪೌರಾಯುಕ್ತರಾಗಿ ಕಾರವಾರ ನಗರಸಭೆಯ ಪೌರಾಯುಕ್ತ ರಮೇಶ್ ಪಿ ನಾಯ್ಕ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
Next Story





