Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ಕಾಯ್ದೆಗಳ ರದ್ದತಿಗಾಗಿ ನಡೆದ ರೈತರ...

ಕೃಷಿ ಕಾಯ್ದೆಗಳ ರದ್ದತಿಗಾಗಿ ನಡೆದ ರೈತರ ಹೋರಾಟ ಬಿಜೆಪಿ ಸರ್ಕಾರವನ್ನೇ ಅಲುಗಾಡಿಸಿತು: ದರ್ಶನ್ ಪಾಲ್

16 Feb 2023 3:18 PM IST
share
ಕೃಷಿ ಕಾಯ್ದೆಗಳ ರದ್ದತಿಗಾಗಿ ನಡೆದ ರೈತರ ಹೋರಾಟ ಬಿಜೆಪಿ ಸರ್ಕಾರವನ್ನೇ ಅಲುಗಾಡಿಸಿತು: ದರ್ಶನ್ ಪಾಲ್

ಬೆಂಗಳೂರು: ಎರಡು ವರ್ಷಗಳ ಹಿಂದೆ ದೆಹಲಿ ಒಳಗೊಂಡು, ದೆಹಲಿ ಗಡಿಭಾಗ ಮತ್ತು ಇತರೆ ರಾಜ್ಯಗಳಲ್ಲಿ ನಡೆಸಿದ ರೈತರ ಹೋರಾಟವು ಕೇಂದ್ರ ಸರಕಾರವನ್ನು ಅಲುಗಾಡಿಸಿದ ಹೋರಾಟ ಅದು. ರೈತ ವಿರೋಧಿಯಾಗಿದ್ದ ಮೂರು ಕೃಷಿಕಾಯ್ದೆಗಳನ್ನು ರದ್ದುಗೊಳಿಸಿದ ಹೋರಾಟ ಅದಾಗಿತ್ತು. ಈ ಹೋರಾಟ ರೈತರ ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಿತು. ಸಮರಶೀಲ ಹೋರಾಟದಿಂದ ಕೇಂದ್ರದ ಬಿಜೆಪಿ ಸರ್ಕಾರವನ್ನೇ ನಡುಗುವಂತೆ ಮಾಡಿತು ಎಂದು ದರ್ಶನ್ ಪಾಲ್ ಹೇಳಿದರು.

ಇಂದು (ಫೆಬ್ರವರಿ 16) ಸಂಯುಕ್ತ ಹೋರಾಟ ಕರ್ನಾಟಕ  ವತಿಯಿಂದ ಹಮ್ಮಿಕೊಂಡ ಸಮಸ್ತ ಜನ ಚಳುವಳಿಗಳ ಸಂಯುಕ್ತ ದನಿಯಾಗಿ ʻಜನಾಗ್ರಹ ಸಮಾವೇಶʼವನ್ನು ಉದ್ದೇಶಿಸಿ ರೈತ ಸಂಘಟನೆಯ ರಾಷ್ಟ್ರೀಯ ಹೋರಾಟಗಾರ, ಮುಖಂಡ ದರ್ಶನ್ ಪಾಲ್ ಮಾತನಾಡಿ, ಕೃಷಿ ಕಾಯ್ದೆಗಳ ರದ್ದತಿ ಆಗ್ರಹಿಸಿ ರೈತರು ನಡೆಸಿದ ಹೋರಾಟದಲ್ಲಿ 740 ಜನ ರೈತರು ಮರಣಹೊಂದಿದರು. ಹೋರಾಟವನ್ನು ಹತ್ತಿಕ್ಕಲು ಲಖಿಂಪುರಿ ಹಳ್ಳಿ ಸೇರಿದಂತೆ ಹಲವೆಡೆ ರೈತರ ಮೇಲೆ ಕಗ್ಗೊಲೆ ನಡೆಯಿತು. 2023 ಹಾಗೂ 2024 ನಮಗೆ ಮಹತ್ವದ ದಿನಗಳಾಗಿವೆ. ಚುನಾವಣೆಗಳಲ್ಲಿ ಸರಕಾರಗಳನ್ನು ಸೋಲಿಸಬೇಕು. ರೈತರಷ್ಟೆ ಅಲ್ಲದೆ ಎಲ್ಲರನ್ನು ಒಳಗೊಂಡ ಜನಪ್ರವಾಹದ ಹೋರಾಟ ರೂಪಗೊಳ್ಳಲಿದೆ ಎಂದು ಹೇಳಿದರು.

ಬಿಬಿಸಿ ಮೇಲೆ ದಾಳಿ ನಡೆದಿದೆ. ಮೋದಿ, ಷಾ, ಆದಾನಿಯವರನ್ನು ಪ್ರಶ್ನಿಸಿದರೆ ದೇಶದ್ರೋಹ ಎಂದೆನ್ನುತ್ತಾರೆ. ಅವರ ಬಗ್ಗೆ ಮಾತನಾಡಿದರೆ ಜೈಲಗಟ್ಟುತ್ತಾರೆ. ಇದು ಸರ್ವಾಧಿಕಾರಿ ಸರಕಾರವಾಗಿದೆ. ಹಾಗಾಗಿ ಈ ಸರಕಾರಗಳನ್ನು ಸೋಲಿಸಲು ಪಣ ತೊಡಬೇಕಿದೆ. ಅದಕ್ಕಾಗಿ ಬಲವಾದ ಜನಾಂದೋಲನ ನಡಯಬೇಕು  ಎಂದು ಕರೆ ನೀಡಿದರು.

ಕರ್ನಾಟಕ ಪ್ರಾಂತ ರೈತ ಸಂಘ(ಕೆ ಪಿ ಆರ್ ಎಸ್) ರಾಜ್ಯ ಅಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, ಸರಕಾರಗಳು ರೈತರ ಜೊತೆ ಚಲ್ಲಾಟವಾಡುತ್ತಿವೆ. ಜನರ ಸಂಕಷ್ಟಗಳಿಗೆ ಸ್ಪಂದಿಸದ ಸರಕಾರ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಜನರ ಬಾಳಿಗೆ ಕಂಟಕವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಕಾರ್ಮಿಕರು, ವಿದ್ಯಾರ್ಥಿ, ಯುವಜನರು, ಮಹಿಳೆಯರು, ಕೂಲಿಕಾರರ ಜೊತೆಗೂಡಿ ಜನವಿರೋಧಿ ಸರಕಾರಗಳನ್ನು ಸೋಲಿಸಲಿದ್ದಾರೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘ(ಕೆ ಆರ್ ಆರ್ ಎಸ್)ದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಜನಾಗ್ರಹ ಸಮಾವೇಶದ 12 ಹಕ್ಕೋತ್ತಾಯಗಳನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಎಚ್.ಆರ್. ಬಸವರಾಜಪ್ಪ, ನೂರ್ ಶ್ರೀಧರ್, ದೇವಿ, ಮಾವಳ್ಳಿ ಶಂಕರ್, ಜಿ.ಎನ್. ನಾಗರಾಜ್, ಡಾ. ಸಿದ್ದನಗೌಡ ಪಾಟೀಲ್, ಎಚ್.ಪಿ. ಶಿವಪ್ರಕಾಶ್, ಗುರುಪ್ರಸಾದ್ ಕೆರೆಗೋಡು, ಕುಮಾರ್ ಸಮತಳ, ಚಾಮರಸ ಮಾಲೀಪಾಟೀಲ್, ಡಿ.ಎಚ್ ಪೂಜಾರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ರೈತ ಹೋರಾಟಗಾರರು ಭಾಗವಹಿಸಿದ್ದರು.

share
Next Story
X