ಫೆ.26ರಂದು ಡಾ. ಹೇಮಾವತಿ, ನಟ ದೊಡ್ಡಣ್ಣ ಸೇರಿದಂತೆ 12 ಮಂದಿಗೆ ಸಾಧನಾ ಪ್ರಶಸ್ತಿ ಪ್ರದಾನ

ಮಂಗಳೂರು, ಫೆ.16: ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ವಾರ್ಷಿಕವಾಗಿ ಕೊಡುವ 2022ನೇ ಸಾಲಿನ ಸಾಧನಾ ಪ್ರಶಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಹಿಳಾ ಸಶಕ್ತೀಕರಣ ಯೋಜನೆಯ ಮಾರ್ಗದರ್ಶಕರಾದ ಡಾ. ಹೇಮಾವತಿ ವೀ .ಹೆಗ್ಗಡೆ ಹಾಗೂ ಹಿರಿಯ ನಟ ದೊಡ್ಡಣ್ಣ ಸೇರಿದಂತೆ 12 ಮಂದಿ ಹಾಗೂ ಎರಡು ಸಂಸ್ಥೆ ಆಯ್ಕೆಯಾಗಿದೆ ಎಂದು ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ನಗರದ ಪ್ರೆಸ್ ಕ್ಲಬ್‌ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಫೆ.26ರ ಬೆಳಗ್ಗೆ 9 ರಿಂದ ರಾತ್ರಿ 9ರ ವರೆಗೆ ನಗರದ ಉರ್ವಸ್ಟೋರ್ನಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಹಾಗೂ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಇದರ ಸಹಯೋಗದಲ್ಲಿ ನಾಡು ನುಡಿ ಸಾಹಿತ್ಯ ಸಮ್ಮೇಳನ, ಕಾವ್ಯ ದಶಾವತಾರ-ಕವಿ ಕಾವ್ಯ ಸನ್ಮಾನ, ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಕಥಾಯಜ್ಞ ರಾಷ್ಟ್ರೀಯ ಕಥಾ ಪುರಸ್ಕಾರ ಮತ್ತು ಹಂಸ ಕಾವ್ಯ ರಾಷ್ಟ್ರೀಯ ಕಾವ್ಯ ಪುರಸ್ಕಾರ ಅಖಿಲ ಭಾರತ ಕವಿಗಳು ಮತ್ತು ಲೇಖಕರ ಒಕ್ಕೂಟ ಇದರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯನ್ನು ಜಿ ಆರ್ ಮೆಡಿಕಲ್ ಕಾಲೇಜು ಹಾಗೂ ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಎಸ್ ಗಣೇಶ್ ರಾವ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಸಾರ್ವಜನಿಕರು ಹಾಗೂ ಕವಿಗಳು ಬೆಳಗ್ಗೆ 10 ಗಂಟೆಯೊಳಗೆ ತಮ್ಮ ಹೆಸರನ್ನು ಚೀಟಿಯಲ್ಲಿ ಬರೆದು ಸಮ್ಮೇಳನದ ಆವರಣದಲ್ಲಿ ಇಡಾಲಾಗುವ ಅದೃಷ್ಟದ ಮಡಕೆಯಲ್ಲಿ ಹಾಕಬೇಕು. ಚೀಟಿ ಎತ್ತಿ ಹೆಸರು ಘೋಷಣೆಯಾಗುವವರಿಗೆ ಚಿನ್ನದ ನಾಣ್ಯ, ಬೆಳ್ಳಿ ನಾಣ್ಯ ಹಾಗೂ ಇಪ್ಪತ್ತಕ್ಕೂ ಹೆಚ್ಚು ಉಚಿತ ಬಹುಮಾನ ಗೆಲ್ಲುವ ಅವಕಾಶವಿರುತ್ತದೆ ಎಂದವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕಿ ಲತಾ ಕೃಷ್ಣದಾಸ್, ಸಮ್ಮೇಳನದ ಕಾವ್ಯ ದಶವತಾರದ ಸಂಯೋಜಕಿ ಗೀತಾ ಲಕ್ಷ್ಮೀಶ್ ಹಾಗೂ ಪ್ರತಿಷ್ಠಾನದ ಕಾರ್ಯಕಾರಿ ಸದಸ್ಯೆ ಶಕುಂತಳಾ ಬೆಳ್ಮಣ್ ಉಪಸ್ಥಿತರಿದ್ದರು.