ಉಡುಪಿ ಜಿಲ್ಲಾ ಮಟ್ಟದ ತರಬೇತುದಾರರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಫೆ.೧೬: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ, ಕೆ.ಎಚ್.ಪಿ.ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತರಬೇತುದಾರರಿಗೆ ತರಬೇತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ನವೀನ್ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯ ಒದಗಿಸುವುದು ಶ್ಲಾಘನೀಯ ಎಂದರು.
ಉಡುಪಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ವಿಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ, ಬ್ರಹ್ಮಾವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಇಬ್ರಾಹಿಂಪುರ, ಕೆ.ಹೆಚ್.ಪಿ.ಟಿ ಯ ವಲಯ ಮುಖ್ಯಸ್ಥ ಶಶಿಧರನ್, ಮೈಸೂರು ಜಿಲ್ಲಾ ಸಂಯೋಜಕ ನಾಗೇಂದ್ರ ಸ್ವಾಮಿ, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಗ್ರಾಪಂ ಆರೋಗ್ಯ ಅಮೃತ ಅಭಿಯಾನ ಯೋಜನೆಯ ಕೈಪಿಡಿಯನ್ನು ಹಾಗೂ ಪ್ಲಿಪ್‌ಚಾರ್ಟ್ ಬಿಡುಗಡೆ ಮಾಡಲಾಯಿತು. ತಾಲೂಕು ಸಂಯೋಜಕಿ ಅರ್ಪಿತಾ ಬ್ರಹ್ಮಾವರ ಸ್ವಾಗತಿಸಿ, ಜಿಲ್ಲಾ ಸಂಯೋಜಕ ಪ್ರಸಾದ್ ನಿರೂಪಿಸಿ, ವಂದಿಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಹಾಗೂ ಕೆ.ಎಚ್.ಪಿ.ಟಿ ಜಿಲ್ಲಾ ಸಂಯೋಜಕರು ಹಾಗೂ ಎಲ್ಲ ತಾಲೂಕು ಸಂಯೋಜಕರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
