Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿನ ಭಯ ನನಗಿಲ್ಲ, ಅಶ್ವತ್ಥ ನಾರಾಯಣ...

ಸಾವಿನ ಭಯ ನನಗಿಲ್ಲ, ಅಶ್ವತ್ಥ ನಾರಾಯಣ ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ: ಸಿದ್ದರಾಮಯ್ಯ

17 Feb 2023 12:04 AM IST
share
ಸಾವಿನ ಭಯ ನನಗಿಲ್ಲ, ಅಶ್ವತ್ಥ ನಾರಾಯಣ ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ: ಸಿದ್ದರಾಮಯ್ಯ

ಬೆಂಗಳೂರು, ಫೆ.16: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗುರುವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅಶ್ವತ್ಥ ನಾರಾಯಣ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ಬಂದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕೊಲೆಗಡುಕ ಮನಸ್ಥಿತಿಯ ಅಶ್ವತ್ಥ ನಾರಾಯಣ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್. ಇಂತಹವರು ಉನ್ನತ ಶಿಕ್ಷಣ ಸಚಿವರಾದರೇ? ರಾಜ್ಯ ಬಿಜೆಪಿ ಸಮಾಜಕ್ಕೆ ಯಾವ ಸಂದೇಶ ಕೊಡಲಿಕ್ಕೆ ಹೊರಟಿದೆ? ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿಯೇ ಅವರ ಬೌದ್ಧಿಕ ದಿವಾಳಿತನದ ಪ್ರತೀಕ. ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ. ರಾಜ್ಯ ಬಿಜೆಪಿ ಅವರದ್ದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತ ಎಂದು ಅವರು ಹೇಳಿದ್ದಾರೆ.

ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು. ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ; ರಮ್ಯಾ ಸಹೋದರಿ ಇದ್ದಂತೆ, ನನ್ನ ವಿರುದ್ಧ ಸ್ಪರ್ಧೆ ಮಾಡುವುದಾದರೆ ಮಾಡಲಿ..: ಕುಮಾರಸ್ವಾಮಿ 

ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು.
ಈ ಬಗ್ಗೆ ಜನ ಎಚ್ಚರಗೊಳ್ಳಬೇಕು. 6/6#ಕೊಲೆಗಡುಕಮನಸ್ಥಿತಿಯ_ಬಿಜೆಪಿ

— Siddaramaiah (@siddaramaiah) February 16, 2023
share
Next Story
X