Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲವ್ ಜಿಹಾದ್ ಅಪರಾಧ ವರ್ಗೀಕರಣ ಇಲ್ಲ:...

ಲವ್ ಜಿಹಾದ್ ಅಪರಾಧ ವರ್ಗೀಕರಣ ಇಲ್ಲ: ಸರಕಾರದ ಸ್ಪಷ್ಟನೆ

ಮದುವೆ ಆಮಿಷ ಒಡ್ಡಿ ಮತಾಂತರ: ಮೂರು ಪ್ರಕರಣ ದಾಖಲು

ಜಿ.ಮಹಾಂತೇಶ್ಜಿ.ಮಹಾಂತೇಶ್17 Feb 2023 9:05 AM IST
share
ಲವ್ ಜಿಹಾದ್ ಅಪರಾಧ ವರ್ಗೀಕರಣ ಇಲ್ಲ: ಸರಕಾರದ ಸ್ಪಷ್ಟನೆ
ಮದುವೆ ಆಮಿಷ ಒಡ್ಡಿ ಮತಾಂತರ: ಮೂರು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿವೆ ಎಂದು ಹಿಂದೂಪರ ಸಂಘಟನೆಗಳು ಹುಯಿಲೆಬ್ಬಿಸಿದ್ದರ ಬೆನ್ನಲ್ಲೇ ಇದೀಗ ರಾಜ್ಯ ಸರಕಾರವು ಲವ್ ಜಿಹಾದ್ ಪದಕ್ಕೆ ನಿಖರವಾದ ವ್ಯಾಖ್ಯಾನವಾಗಲೀ, ಅಪರಾಧ ವರ್ಗೀಕರಣವಾಗಲೀ ಇಲ್ಲ ಎಂದು ಹೇಳಿಕೆ ನೀಡಿದೆ.

ವಿಧಾನಸಭೆಯಲ್ಲಿ ಈ ಕುರಿತು ಶಾಸಕ ಪ್ರಿಯಾಂಕ್ ಖರ್ಗೆ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಲವ್ ಜಿಹಾದ್ ಕುರಿತು ಮಾಹಿತಿ ಒದಗಿಸಿದ್ದಾರೆ.

ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವುದು ಮತ್ತು ಪೊಲೀಸ್ ದಳ ರಚಿಸುವ ಕುರಿತಾಗಿ ಸರಕಾರದ ಮಟ್ಟದಲ್ಲಿ ಚರ್ಚೆ ಕುರಿತು ಪರಿಶೀಲಿಸಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹಿಂದೂ ಜನಜಾಗೃತಿ ಸಮಿತಿಗೆ ಭರವಸೆ ನೀಡಿದ್ದರ ಬೆನ್ನಲ್ಲೇ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರವು ಮುನ್ನೆಲೆಗೆ ಬಂದಿದೆ.

ನಿಖರವಾದ ವ್ಯಾಖ್ಯಾನ ಮತ್ತು ಅಪರಾಧ ವರ್ಗೀಕರಣವಾಗಲೀ ಮಾಡಿಲ್ಲ ಎಂದು ಹೇಳಿರುವ ಸಚಿವ ಆರಗ ಜ್ಞಾನೇಂದ್ರ ಅವರು ಮದುವೆ ಆಮಿಷವೊಡ್ಡಿ ಮತಾಂತರಗೊಳಿಸಲು ಒತ್ತಾಯಿಸುವ ಸಂಬಂಧ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ 2022ರಡಿ ಪ್ರಕರಣಗಳು ದಾಖಲಾಗಿವೆ ಎಂದು ಉತ್ತರ ನೀಡಿದ್ದಾರೆ.

ಆದರೆ ಮತಾಂತರದಡಿಯಲ್ಲಿಯೂ ಬೆಂಗಳೂರು ನಗರ, ಮಂಡ್ಯ, ಚಿತ್ರದುರ್ಗ ಜಿಲ್ಲೆಯಲ್ಲಷ್ಟೇ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ ಎಂಬುದು ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

 ಬೆಂಗಳೂರು ನಗರ ಯಶವಂತಪುರ (ಮೊಕದ್ದಮೆ ಸಂಖ್ಯೆ 329/2022 ಕಲಂ 5) ಮಂಡ್ಯ (ನಾಗಮಂಗಲ ಟೌನ್ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 121/2022), ಚಿತ್ರದುರ್ಗ (ಕೋಟೆ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 137/2022) ಮೊಕದ್ದಮೆ ದಾಖಲಾಗಿವೆ. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ 2022ರಡಿ ತಪ್ಪಿಸ್ಥತರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗುತ್ತಿದೆ. ಬೆಂಗಳೂರು ನಗರ, ಮಂಡ್ಯ ಮತ್ತು ಚಿತ್ರದುರ್ಗದಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರಿಸಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X