ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ: ವರದಿ

ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ (BCCI chief selector Chetan Sharma) ಅವರು ಕುಟುಕು ಕಾರ್ಯಾಚರಣೆಯಲ್ಲಿ ನೀಡಿದ ಹೇಳಿಕೆಯಿಂದ ಉಂಟಾಗಿರುವ ವಿವಾದದ ನಡುವೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ.
ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಅವರು ವಿರಾಟ್ ಕೊಹ್ಲಿ, ಸೌರವ್ ಗಂಗುಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ತಂಡದ ಇತರ ಹಲವಾರು ಆಟಗಾರರ ಬಗ್ಗೆ ಕೆಲವು ವಿಚಿತ್ರವಾದ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಸಿಸಿಐ ಈ ವಿಷಯದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
“ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ, ಅವರು ಅದನ್ನು ಅಂಗೀಕರಿಸಿದ್ದಾರೆ'' ಎಂದು ಎಎನ್‌ಐ ಟ್ವೀಟ್ ಮಾಡಿದೆ.
ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್‌ನಲ್ಲಿ ಭಾರತದ ಅಭಿಯಾನದ ನಂತರ ಮುಖ್ಯ ಆಯ್ಕೆಗಾರರಾಗಿ ಮರು ಆಯ್ಕೆಯಾಗಿದ್ದ ಶರ್ಮಾ, ZEE ಮೀಡಿಯಾದ 'ಸ್ಟಿಂಗ್ ಆಪರೇಷನ್' ನಲ್ಲಿ ಟೀಮ್ ಇಂಡಿಯಾದ ಆಂತರಿಕ ಮಾಹಿತಿಯನ್ನು ಸೋರಿಕೆ ಮಾಡಿದ್ದರು.ಈ ಹಿನ್ನಲೆಯಲ್ಲಿ ಬಿಸಿಸಿಐ ಕೆಂಗೆಣ್ಣಿಗೆ ಗುರಿಯಾಗಿದ್ದರು. ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಬಿಸಿಸಿಐ ತಿಳಿಸಿತ್ತು ಎಂದು ವರದಿಯಾಗಿದೆ.
ಮುಖ್ಯ ಆಯ್ಕೆದಾರ ಶರ್ಮಾ ಅವರ ಸ್ಫೋಟಕ ಹೇಳಿಕೆಗಳು ಭಾರತೀಯ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿತ್ತು.
80 ರಿಂದ 85 ರಷ್ಟು ಫಿಟ್ ಆಗಿದ್ದರೂ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಬಹಳಷ್ಟು ಆಟಗಾರರು ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಶರ್ಮಾ ಆರೋಪಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಗೆ ಬುಮ್ರಾ ವಾಪಸಾಗುವ ಬಗ್ಗೆ ತನ್ನ ಹಾಗು ತಂಡದ ಮ್ಯಾನೇಜ್‌ಮೆಂಟ್ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಭಾರತದ ಮಾಜಿ ವೇಗದ ಬೌಲರ್ ಕುಟುಕು ಕಾರ್ಯಾಚರಣೆಯಲ್ಲಿ ಹೇಳಿದ್ದರು.
ಮಾಜಿ ನಾಯಕ ಕೊಹ್ಲಿ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ ನಡುವೆ ದೊಡ್ಡ ಅಹಂ ಘರ್ಷಣೆ ಇತ್ತು ಎಂದು ಶರ್ಮಾ ಆರೋಪಿಸಿದ್ದಾರೆ.
BCCI chief selector Chetan Sharma resigns from his post. He sent his resignation to BCCI Secretary Jay Shah who accepted it.
— ANI (@ANI) February 17, 2023
(File Pic) pic.twitter.com/1BhoLiIbPc