ಮಾಜಿ ಸ್ಪೀಕರ್ ಕೆ. ಆರ್ ರಮೇಶ್ ಕುಮಾರ್ ಪತ್ನಿ ನಿಧನ

ಕೋಲಾರ: ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನ ಹಿರಿಯ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.
ವಿಜಯಮ್ಮ ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ ಕೆ. ಆರ್ ರಮೇಶ್, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.
— Siddaramaiah (@siddaramaiah) February 17, 2023
ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/55P2aHG0Kk
Next Story







