ರಾಮನಗರ| ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದ ಆರೋಪಿಯ ಬಂಧನ

ರಾಮನಗರ: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಕನಕಪುರ ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕನಕಪುರದ ನಿವಾಸಿ ಸುಮಂತ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಕನಕಪುರ ತಾಲೂಕಿನ ಬೈಪಾಸ್ ರಸ್ತೆ ನಾರಾಯಣಪ್ಪ ಕೆರೆ ಬಳಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ಸುಮಂತ ಪ್ರೀತಿಸುವಂತೆ ಪೀಡಿಸಿದ್ದಾನೆ. ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಆರೋಪಿ ಸುಮಂತ್ ವಿದ್ಯಾರ್ಥಿನಿಯ ಮುಖಕ್ಕೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆ್ಯಸಿಡ್ ದಾಳಿಯಿಂದ ವಿದ್ಯಾರ್ಥಿನಿಯ ಎಡ ಭಾಗದ ಕಣ್ಣಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕನಕಪುರ ಟೌನ್ ಠಾಣೆಯಲ್ಲಿ ಪೊಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.







.jpeg)

.jpeg)

