ಮಂಗಳೂರು: ಬಜೆಟ್, ಸರಕಾರದ ವಿರುದ್ಧ ಪ್ರತಿಭಟನೆ

ಮಂಗಳೂರು: ಹೊರಗುತ್ತಿಗೆ ನೌಕರರು ಮತ್ತು ಸಫಾಯಿ ಕರ್ಮಚಾರಿಗಳ ನ್ಯಾಯ ಸಮ್ಮತ ಬೇಡಿಕೆಗೆ ಬಜೆಟ್‌ನಲ್ಲಿ ಸ್ಪಂದಿಸದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ ಮತ್ತು ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಶನಿವಾರ ನಗರದ ಮನಪಾ ಕಚೇರಿಯ ಮುಂದೆ ಪ್ರತಿಭಟನಾ ಸಭೆ ನಡೆಯಿತು.
ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ವಿಭಾಗೀಯ ಸಂಚಾಲಕ ಅಣ್ಣಪ್ಪಕಾರೆಕಾಡು, ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಸಫಾಯಿ ಕರ್ಮಚಾರಿಗಳ ಸಂಘದ ಮುಖಂಡರಾದ ಕೇಶವ, ಪೂವಪ್ಪ, ನಾಗರಾಜ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Next Story