Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದ ಅಭ್ಯರ್ಥಿಗಳ ಆಯ್ಕೆ, ಟಿಕೆಟ್...

ಪಕ್ಷದ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ ನನ್ನ ವ್ಯಾಪ್ತಿಯಲ್ಲಿ ಇಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

18 Feb 2023 5:01 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಕ್ಷದ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ ನನ್ನ ವ್ಯಾಪ್ತಿಯಲ್ಲಿ ಇಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ

ವಿಜಯಪುರ: ‘ಪಕ್ಷದ ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ನನ್ನ ವ್ಯಾಪ್ತಿಯಲ್ಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ಮಾಡಿದ್ದು, ಆ ಸಮಿತಿ ಒಮ್ಮತ ನಿರ್ಣಯ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಗರದ 770 ಲಿಂಗದ ಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮುಂಬರಲಿರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಎಲ್ಲರೊಂದಿಗೆ ಚರ್ಚಿಸಿ ಚುನಾವಣೆಗೆ ಟಿಕೆಟ್ ನೀಡಲಾಗುವುದು ಎಂದು ವಿವರಣೆ ನೀಡಿದರು.

ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಒಂದು ಕಡೆಯಾದರೆ, ಕಾಂಗ್ರೆಸ್ ಮತ್ತು ಕರ್ನಾಟಕದ ಜನತೆ ಒಂದು ಕಡೆಗೆ ಇದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರಾನೇರ ಸ್ಪರ್ಧೆ ಏರ್ಪಟ್ಟಿದ್ದು, ಭ್ರಷ್ಟ ಬಿಜೆಪಿ ಸರಕಾರ ಕಿತ್ತೊಗೆಯಲು ಜನತೆ ಸಜ್ಜಾಗಿದ್ದಾರೆ ಎಂದು ಹೇಳಿದರು.

ಡಾ.ಪರಮೇಶ್ವರ್ ನಮ್ಮ ಪಕ್ಷದ ಹಿರಿಯರು. ಮುಂಬರಲಿರುವ ಚುನಾವಣೆಯ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಪಕ್ಷದಲ್ಲಿ ಅಧಿಕಾರಕ್ಕಾಗಿ ಯಾರೂ ಜಗಳ ನಡೆಸುತ್ತಿಲ್ಲ ಎಂದ ಅವರು, ಪ್ರತಿ ಮನೆಗೆ 200 ಯುನಿಟ್ ವಿದ್ಯುತ್, ಪ್ರತಿಯೊಬ್ಬ ಮಹಿಳೆಯರಿಗೆ 2 ಸಾವಿರ ರೂ.ಮಾಸಾಶನ ನೀಡುವುದು ಎಂದು ಈಗಾಗಲೇ ಪಕ್ಷದಿಂದ ಘೋಷಣೆ ಮಾಡಲಾಗಿದೆ ಎಂದರು.

ಪರಶಿವನ ಹೇಳಿಕೆಯಂತೆ ಕೆಟ್ಟ ವಿಚಾರಗಳು ತಲೆಯನ್ನು ಮೀರಿ ಬೆಳೆದರೆ ಅದರ ಅಂತ್ಯ ಮಾಡಬೇಕು. ಈಗ ಕಲಿಯುಗದಲ್ಲಿ ಮತ ಹಾಕುವ ಮೂಲಕ ಅದಕ್ಕೆ ಮತದಾರರು ಅಂತ್ಯ ಹಾಡಬೇಕು. ಯಾವುದೇ ಜಾತಿ ಮತ್ತು ಪಂಥಗಳ ಜನರು ಮತದಾನ ಮಾಡುವ ಮೂಲಕ ರಾಜ್ಯದ ಕೆಟ್ಟ ಬಿಜೆಪಿ ಸರಕಾರವನ್ನು ತೊಲಗಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಕೋರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಆಲಗೂರ, ಸೋಮನಾಥ ಕಳ್ಳಿಮನಿ, ಶರಣಪ್ಪ ಸುಣಗಾರ, ಶ್ರೀನಾಥ ಪೂಜಾರಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X