ಆ್ಯಸಿಡ್ ದಾಳಿಕೋರರಿಗೆ ಕಠಿಣ ಶಿಕ್ಷೆ ವಿಧಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ, ದೌರ್ಜನ್ಯ ಹಾಗೂ ಆ್ಯಸಿಡ್ ದಾಳಿಯನ್ನು ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಮಿಂಟೋ ಕಣ್ಣಾಸ್ಪತ್ರೆಯಲ್ಲಿ ಆ್ಯಸಿಡ್ ದಾಳಿ ಸಂತ್ರಸ್ಥ ಬಾಲಕಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಣ್ಣು ಮಕ್ಕಳ ಮೇಲೆ ನಿರಂತರ ದೌರ್ಜನ್ಯ ಮುಂದುವರೆಯುತ್ತಿದೆ. ನಿರ್ಭಯಾ ಪ್ರಕರಣ ಬಳಿಕ ಕಾನೂನಿನಲ್ಲಿ ಹಲವು ಬದಲಾವಣೆ ಮಾಡಿದರೂ ಕಿರುಕುಳ ನಿಂತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ಆಗುತ್ತದೆ. ಅದೇ ರೀತಿ ಆ್ಯಸಿಡ್ ದಾಳಿಕೋರರಿಗೂ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತೆ ಶಿಕ್ಷಣ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಆಕೆಯ ಶಿಕ್ಷಣ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.
Next Story





