ಕಾಪು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ 2 ತಿಂಗಳ ಬಳಿಕ ಹೊಳೆಯಲ್ಲಿ ಪತ್ತೆ

ಕಾಪು, ಫೆ.19: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಎರಡು ತಿಂಗಳ ಬಳಿಕ ಹೊಳೆಯಲ್ಲಿ ಪತ್ತೆಯಾಗಿರುವ ಘಟನೆ ಮಲ್ಲಾರು ಗ್ರಾಮದ ಕೊಂಬ ಗುಡ್ಡೆಯಲ್ಲಿರುವ ಕೊಡ್ಪಲ್ಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಚಂದ್ರ(48) ಎಂದು ಗುರುತಿಸಲಾಗಿದೆ. ಇವರು ಡಿ.21ರಂದು ರಾತ್ರಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಫೆ.18ರಂದು ಮಧ್ಯಾಹ್ನ ಕೊಡ್ಪಲ್ಕಟ್ಟೆ ಹೊಳೆಯ ಬದಿಯಲ್ಲಿ ಚಂದ್ರ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ಹೊಳೆ ದಾಟುವಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸ್ ದೂರಿನಲ್ಲಿ ಶಂಕಿಸಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story