Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಯನಡ್ಕ | ಶೈಕ್ಷಣಿಕ ಕಾರ್ಯಾಗಾರಕ್ಕೆ...

ಅಡ್ಯನಡ್ಕ | ಶೈಕ್ಷಣಿಕ ಕಾರ್ಯಾಗಾರಕ್ಕೆ ಸಂಘ ಪರಿವಾರದ ಸಂಘಟನೆಯಿಂದ ಅಡ್ಡಿ: ಆರೋಪ

ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ: ದೂರು ದಾಖಲು

19 Feb 2023 12:48 PM IST
share
ಅಡ್ಯನಡ್ಕ | ಶೈಕ್ಷಣಿಕ ಕಾರ್ಯಾಗಾರಕ್ಕೆ ಸಂಘ ಪರಿವಾರದ ಸಂಘಟನೆಯಿಂದ ಅಡ್ಡಿ: ಆರೋಪ
ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ: ದೂರು ದಾಖಲು

ವಿಟ್ಲ, ಫೆ.19: ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಮಿಕ್ ಧಾರ್ಮಿಕ ಪ್ರವಚನ ಮಾಡಿದ್ದಾರೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ಶನಿವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಇದಲ್ಲದೆ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಕರೆಸಿಕೊಂಡು ಎರಡು ಕೋಮುಗಳ ನಡುವೆ ಸಂಘರ್ಷ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಕಾರ್ಯಾಗಾರ ಸಂಘಟಕರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.

ಇಲ್ಲಿನ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ಎಂಬ ಸಂಘಟನೆ  ಪ್ರತೀ ವರ್ಷ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸುತ್ತಿದ್ದು, ಅದರಂತೆ ಶನಿವಾರ ಅಡ್ಯನಡ್ಕದ ಹಾಲ್ ವೊಂದರಲ್ಲಿ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಂಡಿತ್ತು. ಸ್ಥಳೀಯ ಖಾಸಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಘ ಪರಿವಾರದ ಕಾರ್ಯಕರ್ತರು ಕಾರ್ಯಾಗಾರ ನಡೆಯುತ್ತಿದ್ದ ಹಾಲ್ ಗೆ ನುಗ್ಗಿ ಅಡ್ಡಿಪಡಿಸಿದ್ದಾರೆ. "ಕಾರ್ಯಾಗಾರದಲ್ಲಿ ಭಾಗವಹಿಸಿರುವ ಎಲ್ಲ ಹಿಂದೂ ವಿದ್ಯಾರ್ಥಿಗಳು  ಹಾಲ್ ನಿಂದ ಹೊರಬನ್ನಿ" ಒತ್ತಾಯಿಸಿದರು ಎಂದು ತಿಳಿದುಬಂದಿದೆ.  

ದೂರು ದಾಖಲು: ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಕರೆಸಿಕೊಂಡು, ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಸಹಿತ ಕಾರ್ಯಾಗಾರ ಆಯೋಜಕರ ವಿರುದ್ಧ ಕೇಪು ನೆಕ್ಕರೆ ಮನೆಯ ಮಾಧವ ಮೂಲ್ಯ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮ ಬೋಧನೆ ಮಾಡಿಲ್ಲ: ಸಂಘಟಕರ ಸ್ಪಷ್ಟನೆ

"ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ವತಿಯಿಂದ ಕಳೆದ 15 ವರ್ಷಗಳಿಂದ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸುತ್ತಿದ್ದೇವೆ. ಇದಲ್ಲದೆ ಅರ್ಹ ಮಕ್ಕಳಿಗೆ ಪುಸ್ತಕ, ಇನ್ನಿತರ ಸೌಲಭ್ಯಗಳನ್ನು ನೀಡುವ ಕಾರ್ಯ ಮಾಡಲಾಗುತ್ತಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಹಾಯಕವಾಗಲಿ ಎಂಬ ಉದ್ದೇಶದಿಂದ ಅಡ್ಯನಡ್ಕದಲ್ಲಿ ಕಾರ್ಯಾಗಾರ ಆಯೋಜಸಿದ್ದೆವು. ಇಲ್ಲಿ ಧರ್ಮದ ಬೋಧನೆ ಮಾಡಿಲ್ಲ" ಎಂದು ಸಂಘಟಕರು ತಿಳಿಸಿದ್ದಾರೆ.

share
Next Story
X