ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡುವೆಟ್ನಾಯ ನಿಧನ

ಬೆಳ್ತಂಗಡಿ, ಫೆ.19: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡುವೆಟ್ನಾಯ(78) ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ತನ್ನ ಮನೆಯಲ್ಲಿ ನಿಧನರಾದರು.
ಹಲವಾರು ಸಮಾಜಮುಖಿ ಚಟುವಟಿಕೆಗಳ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ವಿಜಯರಾಘವ ಪಡುವೆಟ್ನಾಯ ಅವರು ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು, ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಭಾದ ಗೌರವ ಅಧ್ಯಕ್ಷರಾಗಿ ಹಲವು ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿಗಳ ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
Next Story





