Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿ.ಟಿ.ರವಿ ಆಪ್ತ ಎಚ್.ಡಿ. ತಮ್ಮಯ್ಯ...

ಸಿ.ಟಿ.ರವಿ ಆಪ್ತ ಎಚ್.ಡಿ. ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ

ಹೊಸದಿಲ್ಲಿಗೆ ಸಂದೇಶ ರವಾನಿಸಿದೆ ಎಂದ ಡಿ.ಕೆ. ಶಿವಕುಮಾರ್

19 Feb 2023 6:10 PM IST
share
ಸಿ.ಟಿ.ರವಿ ಆಪ್ತ ಎಚ್.ಡಿ. ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ
ಹೊಸದಿಲ್ಲಿಗೆ ಸಂದೇಶ ರವಾನಿಸಿದೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿಕ್ಕಮಗಳೂರು ರಾಜ್ಯದ ರಾಜಕೀಯದ ದಿಕ್ಸೂಚಿ ಬದಲಿಸುವ ಜಿಲ್ಲೆಗಳಲ್ಲಿ ಒಂದಾಗಿದ್ದು, ಈ ಜಿಲ್ಲೆಯ ಬಿಜೆಪಿ ನಾಯಕ ಎಚ್.ಡಿ. ತಮ್ಮಯ್ಯ ಕಾಂಗ್ರೆಸ್ ಪಕ್ಷ ಸೇರ್ಪಡೆ, ರಾಜಕೀಯ ಬದಲಾವಣೆ ಗಾಳಿ ಬೀಸುವ ಸಂದೇಶವನ್ನು ದಿಲ್ಲಿಗೆ ರವಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮುಖಂಡ, ಸಿ.ಟಿ.ರವಿ ಆಪ್ತ ಎಚ್.ಡಿ ತಮ್ಮಯ್ಯ ಹಾಗೂ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, ‘ಚಿಕ್ಕಮಗಳೂರು ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ರಾಜಕೀಯ ಬದಲಾವಣೆ ಸಂದೇಶ ಕೊಟ್ಟ ಇತಿಹಾಸವಿರುವ ಜಿಲ್ಲೆ. ಈ ಜಿಲ್ಲೆಯ ಜನರು ಪ್ರಜ್ಞಾವಂತರಿದ್ದಾರೆ. ಇಂದು ಪಕ್ಷ ಸೇರುತ್ತಿರುವ ನಾಯಕರುಗಳು ನಿಮ್ಮ ಬೂತ್‍ಗಳಲ್ಲಿ ಹೋಗಿ ಹೆಚ್ಚು ಜನರನ್ನು ಕಾಂಗ್ರೆಸ್ ಪಕ್ಷದ ಸದಸ್ಯರನ್ನಾಗಿ ಮಾಡಬೇಕು. ಆ ಮೂಲಕ ನೀವು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಸಂದೇಶ ರವಾನಿಸಬೇಕು ಎಂದು ಸಲಹೆ ನೀಡಿದರು.

ನಾನು ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕಾರ ಮಾಡಿದಾಗ ಒಂದು ಮಾತು ಹೇಳಿದ್ದೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಆ ರೀತಿ ಶಂಕರ್ ಕಳೆದ ಬಾರಿ ಚುನಾವಣೆ ನಂತರ ಚಿಕ್ಕಮಗಳೂರು ಜಿಲ್ಲೆಯ ವೈಎಸ್‍ವಿ ದತ್ತಾ, ಹರೀಶ್, ಗೋಪಿಕೃಷ್ಣ, ಶಿವಶಂಕರಪ್ಪ ಸೇರಿದಂತೆ ಬೇರೆ ಪಕ್ಷದ ನಾಯಕರು ಹಾಗೂ ಬಂಡಾಯ ನಾಯಕರು ಸೇರಿ ಒಬ್ಬೊಬ್ಬರಾಗಿ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.

‘ತಮ್ಮಯ್ಯ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾಡಿ ಶಕ್ತಿ ಪ್ರದರ್ಶ ಮಾಡಲು ಆಲೋಚಿಸಿದ್ದೆವು. ಸಂಘಟನೆಗೆ ತೊಂದರೆ ಆಗಬಾರದು ಎಂದು ಇಲ್ಲಿ ಸೇರ್ಪಡೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಮತ್ತೊಮ್ಮೆ ಈ ಕಾರ್ಯ ಮಾಡಲಾಗುವುದು. ನಾಳೆಯೂ ಪಕ್ಷ ಸೇರ್ಪಡೆ ಕಾರ್ಯಕ್ರಮವಿದ್ದು, ನಾನು ಉಪಸ್ಥಿತನಿರಲು ಆಗುವುದಿಲ್ಲ. ಎಐಸಿಸಿ ನಾಯಕರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಕೆಲವು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಇನ್ನು ಹಾಲಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕೆಲವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲು ಕಷ್ಟವಾಗುತ್ತದೆ. ಮತ್ತೆ ಕೆಲವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಈಗ ಆ ನಾಯಕರ ಹೆಸರು ಪ್ರಸ್ತಾಪ ಮಾಡುವುದಿಲ್ಲ. ನಾನು ಗಾಳಿಯಲ್ಲಿ ಗುಂಡು ಹೊಡೆದು ಅವರ ರಾಜಕೀಯ ಜೀವನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದಕ್ಕೆ ಈ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರುತ್ತಿರುವುದೇ ಸಾಕ್ಷಿ. ಬಿಜೆಪಿ ರಾಷ್ಟ್ರೀಯ ನಾಯಕರು ಕ್ಷೇತ್ರವಾರು ಪ್ರಚಾರ ಮಾಡುತ್ತಿದ್ದಾರೆ. ಅದು ತಪ್ಪಲ್ಲ. ಆದರೆ ಅವರು ಸೋಲುವ ಭಯದಲ್ಲಿ ಈ ರೀತಿ ಮಾಡುತ್ತಿರುವುದು ಸ್ಪಷ್ಟವಾಗಿದೆ. ಬಿಜೆಪಿ 5 ವರ್ಷಗಳ ಹಿಂದೆ ನೀಡಿದ್ದ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸಲು ಈ ಸರಕಾರದಿಂದ ಸಾಧ್ಯವಾಗಲಿಲ್ಲ. ಈ ಸರಕಾರದ ಕೊನೆಯ ಬಜೆಟ್‍ನಲ್ಲಿ ಭರವಸೆ ಈಡೇರಿಸುವ ಪ್ರಯತ್ನ ಮಾಡುವ ನಿರೀಕ್ಷೆ ಇತ್ತು. ಅಧಿಕಾರ ಇದ್ದಾಗ ಇವರಿಂದ ಏನು ಮಾಡಲು ಆಗಲಿಲ್ಲ ಎಂದು ಟೀಕಿಸಿದರು.

ಸರಕಾರದ ವೈಫಲ್ಯಗಳಿಂದ ಹಳ್ಳಿ ಹಾಗೂ ಬೂತ್ ಮಟ್ಟದಲ್ಲಿನ ಜನರು ಬದಲಾವಣೆ ಬಯಸಿದ್ದಾರೆ. ಈಗ ಪಕ್ಷ ಸೇರುತ್ತಿರುವ ನಾಯಕರು ರಾಷ್ಟ್ರೀಯ ನಾಯಕರಲ್ಲ, ಆಯಾ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಶ್ರಮಿಸುವ ನಾಯಕರು. ಇವರಿಂದಲೇ ನಾವು ದೊಡ್ಡ ನಾಯಕರಾಗಿ ಬೆಳೆಯಲು ಸಾಧ್ಯ. ಇವರಿಲ್ಲದಿದ್ದರೆ ನಾವು ನಾಯಕರಾಗಿ ಬೆಳೆಯಲು ಸಾಧ್ಯವಿಲ್ಲ. ತಮ್ಮಯ್ಯ ಅವರ ಪಕ್ಷ ಸೇರ್ಪಡೆಯಿಂದ ಚಿಕ್ಕಮಗಳೂರು ಜಿಲ್ಲೆಗೆ ಶುಭಕಾಲ ಆರಂಭವಾಗುತ್ತಿದೆ. ನಾನು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದರು.

‘ಚಿಕ್ಕಮಗಳೂರಿನಲ್ಲಿ ದತ್ತಪೀಠ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದರೆ ಈಗ ಜನರಿಗೆ ಬದುಕು ಕಟ್ಟಿಕೊಳ್ಳಬೇಕಿದೆ. ಬಿಜೆಪಿ ಕೇವಲ ಭಾವನೆ ಮೇಲೆ ರಾಜಕೀಯ ಮಾಡುತ್ತಿದ್ದು, ನಾವು ಬದುಕಿನ ವಿಚಾರವಾಗಿ ರಾಜಕೀಯ ಮಾಡುತ್ತೇವೆ. ಜನ ಅವರ ಹೊಟ್ಟೆಪಾಡು ಏನು ಎಂದು ಪ್ರಶ್ನಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಭಾವನಾತ್ಮಕ ವಿಚಾರವಾಗಿ ಅಶಾಂತಿ ಹೆಚ್ಚಾಗಿರುವ ಪರಿಣಾಮ ಅಲ್ಲಿ ಯಾರೊಬ್ಬರೂ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ’
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
Next Story
X