Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾಷೆಯ ಬಗ್ಗೆ ಅತೀವ ಕಾಳಜಿ ಹೊಂದಿದ್ದ...

ಭಾಷೆಯ ಬಗ್ಗೆ ಅತೀವ ಕಾಳಜಿ ಹೊಂದಿದ್ದ ತಿರುಮಲೇಶ್: ಎಸ್.ಆರ್.ವಿಜಯಶಂಕರ್

19 Feb 2023 8:28 PM IST
share
ಭಾಷೆಯ ಬಗ್ಗೆ ಅತೀವ ಕಾಳಜಿ ಹೊಂದಿದ್ದ ತಿರುಮಲೇಶ್: ಎಸ್.ಆರ್.ವಿಜಯಶಂಕರ್

ಮಣಿಪಾಲ: ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಿಧನರಾದ ಖ್ಯಾತ  ಕವಿ-ವಿಮರ್ಶಕ-ಲೇಖಕ ಪ್ರೊ.ಕೆ.ವಿ. ತಿರುಮಲೇಶ್ ಅವರು ವಾಸ್ತವಿಕ ಪ್ರಪಂಚ ಮತ್ತು ಪ್ರಜ್ಞಾ ಪ್ರಪಂಚದ ನಡುವಿನ ಕೊಂಡಿಯಾಗಿರುವ ಭಾಷೆಯ ಬಗ್ಗೆ ಅತೀವ ಕಾಳಜಿ ವಹಿಸಿದ್ದರು.ತತ್ತ್ವಶಾಸ್ತ್ರವು ಅವರ ಚಿಂತನಾ ಪ್ರಕ್ರಿಯೆಯ ಆಧಾರ ಎಂದು ಹಿರಿಯ ವಿಮರ್ಶಕ, ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಕೇಂದ್ರದ ಗೌರವ ನಿರ್ದೇಶಕ ಎಸ್.ಆರ್. ವಿಜಯಶಂಕರ್ ಹೇಳಿದ್ದಾರೆ.

ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ನಡೆದ ‘ತಿರುಮಲೇಶರನ್ನು ತಿಳಿಯೋಣ:ಒಂದು ನೆನಪು’ ಕಾರ್ಯಕ್ರಮದಲ್ಲಿ ತಿರುಮಲೇಶ್ ಕುರಿತು ಪ್ರೊ.ವಿಜಯಶಂಕರ್ ಮಾತನಾಡಿದರು.

ತಿರುಮಲೇಶ್ ತಮ್ಮ ತಾತ್ವಿಕ ಅನ್ವೇಷಣೆಯಲ್ಲಿ ಬೇರೂರಿದ್ದರು ಹಾಗೂ ಅಸ್ತಿತ್ವವಾದದತ್ತ ಒಲವು ಹೊಂದಿದ್ದರು. ಅವರು ಕವನ, ಸಣ್ಣ ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ, ಅಂಕಣ ಬರಹ ಮುಂತಾದ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಪ್ರಯೋಗ ನಡೆಸಿದ್ದಾರೆ ಮತ್ತು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಅವರ  ಭಾಷಾ ಅಧ್ಯಯ ನದ ಕುರಿತ ಪಾಂಡಿತ್ಯಪೂರ್ಣ ಬರಹಗಳನ್ನು ಒಟ್ಟುಗೂಡಿಸಿ ಅಧ್ಯಯನ ಮಾಡುವ ಅವಶ್ಯಕತೆ ಇದೆ ಎಂದು ವಿಜಯಶಂಕರ್ ಅಭಿಪ್ರಾಯಪಟ್ಟರು.

ತಿರುಮಲೇಶ್ ಒಮ್ಮೆ ಆಯುಧಗಳು ಸುಸಂಸ್ಕೃತವಾಗಲು ಸಾಧ್ಯವಿಲ್ಲ ಎಂಬ ತರ್ಕದಲ್ಲಿ ‘ಸಿವಿಲೈಸ್ಡ್ ವೆಪನ್ಸ್’ ಪದದ ಬದಲಾಗಿ ‘ಪಾಲಿಶ್ಡ್ ವೆಪನ್ಸ್’ ಎಂಬ ಪದ ಪ್ರಯೋಗಿಸಿದ್ದು ಸೇರಿದಂತೆ, ಬೇರೆ ಬೇರೆ ಸಂದರ್ಭಗಳನ್ನು ನೆನೆದು ಅವರು ಭಾಷೆಯ ಬಳಕೆಯಲ್ಲಿ ಬಹಳ ಸಂವೇದನಾಶೀಲರಾಗಿದ್ದರು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ಪ್ರೊ.ತಿರುಮಲೇಶ್ ಅವರ ವಿದ್ವತ್ಪೂರ್ಣ ಲೇಖನಗಳನ್ನು ಪುಸ್ತಕಗಳಾಗಿ ಹೊರತಂದು ಭಾಷಾಂತರಿಸುವ ಅಗತ್ಯವಿದೆ ಮತ್ತು ಅವರ ಜೀವಿತ ಕಾಲದಲ್ಲಿ ನಡೆದ ಅಧ್ಯಯನಕ್ಕಿಂತಲೂ ಹೆಚ್ಚಿನ ಅಧ್ಯಯನವನ್ನು ಅವರ ಮರಣಾನಂತರ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಿರುಮಲೇಶ್ ಅವರ ವಿದ್ಯಾರ್ಥಿ ಪ್ರೊ.ನೇಮಿರಾಜ್ ಶೆಟ್ಟಿ, ಕವಿಯ ಕುಟುಂಬದ ಸದಸ್ಯರು, ಅವರ ಅನೇಕ ಅಭಿಮಾನಿಗಳು ಮತ್ತು ಜಿಸಿಪಿಎಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
Next Story
X