Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೋವಿ, ಪರಿವಾರ ನಾಯ್ಕ್‌ಗೆ ಕಾನೂನು ಬಾಹಿರ...

ಬೋವಿ, ಪರಿವಾರ ನಾಯ್ಕ್‌ಗೆ ಕಾನೂನು ಬಾಹಿರ ಪರಿಶಿಷ್ಟ ಜಾತಿ ಪ್ರಮಾಣಪತ್ರ: ರಾಜಶೇಖರ್ ಕೋಟೆ ಆರೋಪ

19 Feb 2023 9:19 PM IST
share
ಬೋವಿ, ಪರಿವಾರ ನಾಯ್ಕ್‌ಗೆ ಕಾನೂನು ಬಾಹಿರ ಪರಿಶಿಷ್ಟ ಜಾತಿ ಪ್ರಮಾಣಪತ್ರ: ರಾಜಶೇಖರ್ ಕೋಟೆ ಆರೋಪ

ಉಡುಪಿ: ಜಿಲ್ಲೆಯಲ್ಲಿ ಬೋವಿ ಮತ್ತು ಪರಿವಾರ ನಾಯ್ಕ್‌ ಜಾತಿಗಳಿಗೆ ಕಾನೂನು ಬಾಹಿರವಾಗಿ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ರಾಜಶೇಖರ ಕೋಟೆ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡು ಜಾತಿಗಳು ಯಾವ ಕಾಲದಲ್ಲಿಯೂ ಅಸ್ಪೃಶ್ಯ ಜಾತಿಗಳಾಗಿರಲಿಲ್ಲ. ಈ ಜಾತಿಗಳು ಪ್ರವರ್ಗ-೧ರಲ್ಲಿ ಬರುವ ಇತರ ಹಿಂದುಳಿದ ಜಾತಿಗಳಾಗಿವೆ. ಇವರಿಗೆ ಜಿಲ್ಲಾಡಳಿತ ಜಾತಿ ಪ್ರಮಾಣಪತ್ರ ನೀಡುತ್ತಿರುವುದರಿಂದ ಜಿಲ್ಲೆಯ ನೈಜ ಪರಿಶಿಷ್ಟ ಜಾತಿಗಳಿಗೆ ಅನ್ಯಾಯ ಆಗುತ್ತಿದೆ ಎಂದರು.

ಈ ಜಾತಿಗಳ ಕುಲಶಾಸ್ತ್ರ ಅಧ್ಯಯನ ನಡೆಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಆಯೋಗದಿಂದ ಶಿಫಾರಸ್ಸುಗೊಂಡು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು, ಕೇಂದ್ರ ಸರಕಾರವು ಗಜೆಟ್ ನೋಟೀಫಿಕೇಶನ್ ಮಾಡಿದ ನಂತರ ಈ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಿ ಜಾತಿ ಪ್ರಮಾಣ ಪತ್ರ ಗಳನ್ನು ನೀಡಬೇಕಾಗಿತ್ತು. ಆದರೆ ಈಗಿನ ರಾಜ್ಯ ಹಿಂದುಳಿದವರ್ಗಗಳ ಆಯೋಗದ ಅಧ್ಯಕ್ಷರ ಶಿಫಾರಸ್ಸಿನಂತೆ ಯಾವುದೇ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಏಕಾಏಕಿ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡು ತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಅವರು ಆರೋಪಿಸಿದರು.

ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಈ ಜಾತಿಗಳಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ರಾಜಕೀಯ ಪ್ರಭಾವಕ್ಕೆ ಒಳಗಾಗಿ ಜಿಲ್ಲಾಡಳಿತವು ಈ ಕಾನೂನು ಬಾಹಿರ ಕ್ರಮ ಜರಗಿಸುತ್ತಿದ್ದು, ಈ ನಕಲಿ ಜಾತಿ ಪ್ರಮಾಣ ಪತ್ರ ವಿತರಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಂಘಟನೆ ಕಾನೂನು ಕ್ರಮ ಜರಗಿಸ ಲಿದೆ. ಅಲ್ಲದೆ ಇದರ ವಿರುದ್ದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸ ಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ಜಿಲ್ಲಾ ಸಮಿತಿ ಸದಸ್ಯ ಸಂಜೀವ ಬಳ್ಕೂರು, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಅಂಬೇಡ್ಕರ್ ಭವನವನ್ನು 15 ಕೋಟಿ ರೂ. ವೆಚ್ಚದಲ್ಲಿ ಮರು ನಿರ್ಮಾಣ ಮಾಡಬೇಕು ಮತ್ತು ಈ ಭವನದ ಎದುರು ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ರಾಜಶೇಖರ್ ಕೋಟೆ ಆಗ್ರಹಿಸಿದರು.

ಕುಂದಾಪುರ ತಾಲೂಕು ಅಂಬೇಡ್ಕರ್ ಭವನವನ್ನು 10 ಕೋಟಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಬೇಕು. ಜಿಲ್ಲೆಯಿಂದ ಈ ಆರ್ಥಿಕ ವರ್ಷದಲ್ಲಿ ಬಾಬಾ ಸಾಹೇಬರ ದೀಕ್ಷಾ ಭೂಮಿಗೆ ಪ್ರವಾಸ ಕೈಗೊಂಡ ಪರಿಶಿಷ್ಟ ಜಾತಿ ಪ್ರವಾಸಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಯೋಜನೆಯಂತೆ ಕೂಡಲೇ ಅನುದಾನ ಮಂಜೂರು ಮಾಡಬೇಕು.
ಕರಾವಳಿ ಜಿಲ್ಲೆಯ ಪರಿಶಿಷ್ಟ ದೈವ ನರ್ತಕರಿಗೆ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಮಾಶಾಸನಕ್ಕೆ ಸೂಕ್ತ ಅನುದಾನ ಒದಗಿಸದೆ ಇರುವುದು ಖಂಡನೀಯ. ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ರೋಷ್ಟರ್ ನಿಮಯವನ್ನು ಕಡ್ಡಾಯವಾಗಿ ಆಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕಾನೂನು ಬಾಹಿರ ನಿವೇಶನ ಅರ್ಜಿಗಳನ್ನು ರದ್ದುಗೊಳಿಸಲು ದಸಂಸ ಆಗ್ರಹ

ಉಡುಪಿ ನಗರಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ನಗರ ವಾರ್ಡ್‌ನ ಸರ್ವೆ ನಂಬರ್ ೨೩೪/೧ ಮತ್ತು ೨೩೪/೩ರಲ್ಲಿ ಮತ್ತು ಕೆಳಾರ್ಕಳ ಬೆಟ್ಟು ಗ್ರಾಮದ ಸರ್ವೇ ನಂಬರ್ 50ರಲ್ಲಿ ಮನೆ ನಿವೇಶನ ಕೋರಿ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಒತ್ತಾಯಿಸಿದೆ.

ಸುಬ್ರಹ್ಮಣ್ಯ ನಗರದ ಜಮೀನು ಪೊಟ್ಟುಕೆರೆ ಎಂದು ಪ್ರಸಿದ್ಧಿಯಾಗಿದ್ದು, ಯಾವುದೇ ಕಾರಣಕ್ಕೂ ಕೆರೆ ಒತ್ತುವರಿ ಮಾಡಬಾರದೆಂದು ಸರ್ವೋಚ್ಛ ನ್ಯಾಯಾ ಲಯದ ಆದೇಶ ಇದೆ. ಈ ಹಿಂದೆ ಇದೇ ಜಮೀನಿನಲ್ಲಿ ನಿವೇಶನ ನೀಡಲು ಮಾಜಿ ಸಚಿವರು ಅಧಿಕಾರಿಗಳಿಗೆ ಒತ್ತಡ ಹೇರಿ ನಿವೇಶನ ಮಂಜೂರು ಮಾಡಿದ್ದರು. ಆದುದರಿಂದ ಈ ಜಮೀನಿನಲ್ಲಿ ಮನೆ ನಿವೇಶನ ಮಂಜೂರು ಮಾಡಬಾರದು ಮತ್ತು ಈ ಹಿಂದೆ ಮಂಜೂರು ಮಾಡಿರುವ ಮನೆ ನಿವೇಶನವನ್ನು ರದ್ದುಗೊಳಿಸಬೇಕು ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣ ಬಜೆ ಕುಕ್ಕೆಹಳ್ಳಿ ಮತ್ತು ಜಿಲ್ಲಾ ಖಜಾಂಚಿ ಸುಂದರ ಅಂಜಾರು ಜಂಟಿ ಹೇಳಿಕೆಯಲ್ಲಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

share
Next Story
X