ಬಿಜೆಪಿಯಲ್ಲಿ ಭ್ರಷ್ಟಾಚಾರದ ವೈಭವೀಕರಣ: ಬಿ.ಕೆ.ಹರಿಪ್ರಸಾದ್ ಆರೋಪ
ಕುಂದಾಪುರ: ಕಾಂಗ್ರೆಸ್ ಪಕ್ಷ ತನ್ನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕೇವಲ ಭರವಸೆ ಮಾತ್ರ ನೀಡುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತದೆ. ಕುಂದಗನ್ನಡ ಅಭಿವೃದ್ಧಿಯ ಬಗ್ಗೆ ಪ್ರತ್ಯೇಕ ವಿಭಾಗ ಮಾಡಿ ಕೆಲಸ ಮಾಡುತ್ತೇವೆ. ಬಿಜೆಪಿ ಸರಕಾರ ಹಳೆ ಕಾರ್ಯಕ್ರಮಗಳನ್ನೆ ಮತ್ತೆ ಬಜೆಟ್‌ನಲ್ಲಿ ತಿಳಿಸಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ವಂಡ್ಸೆಯಲ್ಲಿ ರವಿವಾರ ನಡೆದ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸ್ಥಾಪನೆ ಮಾಡಿದ್ದ ಅನೇಕ ಜನಪರ ಕಾರ್ಯಕ್ರಮಗಳನ್ನು ಬಿಜೆಪಿ ಸರಕಾರ ಗಾಳಿಗೆ ತೂರಿದೆ. ಅದಾನಿ ಕಂಪೆನಿಗೆ ಸಾಲ ನೀಡಿದ ಎಲ್‌ಐಸಿ ಹಾಗೂ ಸ್ಟೇಟ್ ಬ್ಯಾಂಕ್ ಬಗ್ಗೆ ಕೇಂದ್ರ ಸರಕಾರ ಮೌನ ಮುರಿಯುತ್ತಿಲ್ಲ. ಬಿಜೆಪಿಯಲ್ಲಿ ಭ್ರಷ್ಟಾಚಾರದ ವೈಭವೀಕರಣವಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ನೀಡಿದ ಆಶ್ವಾಸನೆಗಳನ್ನು ಮರೆಯುವ ಬಿಜೆಪಿ ಪಕ್ಷವನ್ನು ಜನ ತಿರಸ್ಕಾರ ಮಾಡುವ ದಿನಗಳು ದೂರವಿಲ್ಲ ಎಂದರು.
ಕೆಪಿಸಿಸಿ ಮಾಧ್ಯಮ ವಿಭಾಗದ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಇಲ್ಲಿನ ಬ್ಯಾಂಕ್ ವಿಲೀನ ಮಾಡುವಾಗ, ಬ್ರಹ್ಮಶ್ರಿ ನಾರಾಯಣ ಗುರುಗಳನ್ನು ಅವಮಾನಿಸುವಾಗ ಮಾತನಾಡದ ಬಿಜೆಪಿಯಿಂದ ಸಾಮಾಜಿಕ ನ್ಯಾಯ ದೊರಕಲು ಸಾಧ್ಯವಿಲ್ಲ. ಬ್ಯಾನರ್ ಹರಿಯುವ ಮೂಲಕ ವಿಕೃತ ಮನಸ್ಥಿತಿಯನ್ನು ಬಿಜೆಪಿ ತೋರುತ್ತಿದೆ. ಮನಸ್ಸು ಮನಸ್ಸು ಕಟ್ಟುವ ಸಂಸ್ಕೃತಿ ಹಾಗೂ ಮನಸ್ಥಿತಿ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿದರು. ವಂಡ್ಸೆ, ಆಲೂರು, ಹರ್ಕೂರು, ಗುಜ್ಜಾಡಿ ಮುಂತಾದ ಗ್ರಾಮಗಳಿಂದ ನೂತನ ವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದವರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಳ್ಳಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಮುಖಂಡರಾದ ಮುರಳೀಧರ ಶೆಟ್ಟಿ ಇಂದ್ರಾಳಿ, ದಿವಾಕರ ಕುಂದರ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ರಾಜು ಎಸ್ ಪೂಜಾರಿ, ವಾಸುದೇವ ಯಡಿಯಾಳ, ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ರೋಶನ್ ಕುಮಾರ್ ಶೆಟ್ಟಿ ಪಕ್ಷದ ಪ್ರಮುಖರಾದ ಮದನ ಕುಮಾರ್ ಉಪ್ಪುಂದ, ಜಯರಾಮ್ ಶೆಟ್ಟಿ ವಂಡಬಳ್ಳಿ, ಉದಯಕುಮಾರ್ ಶೆಟ್ಟಿ ಅಡ್ಕೆಕೊಡ್ಲು, ರಘುರಾಮ ಶೆಟ್ಟಿ ಬಿಜೂರು, ಅನಂತ ಮೊವಾಡಿ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಶರತಕುಮಾರ ಶೆಟ್ಟಿ ಬಾಳಿಕೆರೆ, ಸಂಜಯ್ ಪೂಜಾರಿ ಪಡುಕೋಣೆ, ಅರವಿಂದ ಪೂಜಾರಿ ಪಡುಕೋಣೆ, ಉದಯ್ ಪೂಜಾರಿ ವಂಡ್ಸೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಜಯರಾಮ್ ನಾಯ್ಕ್, ನಾಗಪ್ಪ ಕೊಠಾರಿ ಎನ್‌ಎಸ್‌ಯುಐ ಪ್ರಮುಖರಾದ ಅನ್ವೀತ್ ಕಟೀಲ್, ಅನೀಶ್ ಪೂಜಾರಿ ಬೈಂದೂರು, ಸುಜನ್ ಶೆಟ್ಟಿ ಕುಂದಾಪುರ, ಅರುಣ್ ಹಕ್ಲಾಡಿ, ಗಣೇಶ್ ಪ್ರಸಾದ್ ಶೆಟ್ಟಿ ಬಾಳಿಕೆರೆ, ಸೈಯದ್ ಫುರ್ಖಾನ್ ಉಪಸ್ಥಿತರಿದ್ದರು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಸ್ವಾಗತಿಸಿದರು, ಮಹಿಳಾ ಕಾಂಗ್ರೆಸ್ ಸಮಿತಿ ಸುನೀತಾ ಶೆಟ್ಟಿ ಕೊಕ್ಕರ್ಣೆ ನಿರೂಪಿಸಿದರು.