Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೆಪೋಲಿಯನ್ ಗೆ ಏನಾಯ್ತೆಂಬುದು...

ನೆಪೋಲಿಯನ್ ಗೆ ಏನಾಯ್ತೆಂಬುದು ನೆನಪಿಲ್ಲವೇ?: ಫ್ರಾನ್ಸ್ ಅಧ್ಯಕ್ಷರಿಗೆ ರಶ್ಯ ಎಚ್ಚರಿಕೆ

19 Feb 2023 11:07 PM IST
share
ನೆಪೋಲಿಯನ್ ಗೆ ಏನಾಯ್ತೆಂಬುದು ನೆನಪಿಲ್ಲವೇ?: ಫ್ರಾನ್ಸ್ ಅಧ್ಯಕ್ಷರಿಗೆ ರಶ್ಯ ಎಚ್ಚರಿಕೆ

ಮಾಸ್ಕೋ, ಫೆ.19: ಉಕ್ರೇನ್ ಯುದ್ಧದಲ್ಲಿ  ರಶ್ಯಕ್ಕೆ ಸೋಲಾಗಬೇಕೆಂದು ಬಯಸುವುದಾಗಿ ಹೇಳಿಕೆ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ (Emmanuel Macron) ವಿರುದ್ಧ ವಾಗ್ದಾಳಿ ನಡೆಸಿರುವ ರಶ್ಯ, ಫ್ರಾನ್ಸ್ ನ ಸರ್ವಾಧಿಕಾರಿಯಾಗಿದ್ದ ನೆಪೋಲಿಯನ್ ಬೊನಾಪಾರ್ಟೆಗೆ ಏನಾಯ್ತು ಎಂಬುದನ್ನು ನೆನಪಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದೆ. ಮಾಕ್ರನ್ ರಶ್ಯದ ಜತೆ ಕಪಟ ರಾಜತಾಂತ್ರಿಕತೆ ನಡೆಸುತ್ತಿದ್ದಾರೆ. ಅವರೊಬ್ಬ ನಿಷ್ಪ್ರಯೋಜಕ ಮುಖಂಡ ಎಂದು ರಶ್ಯದ ವಿದೇಶಾಂಗ ಇಲಾಖೆಯ ವಕ್ತಾರೆ ಮರಿಯಾ ಝಕರೋವಾ(Maria Zakharova) ಹೇಳಿದ್ದಾರೆ.

ಉಕ್ರೇನ್ ನಲ್ಲಿ ರಶ್ಯಾಕ್ಕೆ ಸೋಲಾಗಬೇಕು ಎಂದು ಫ್ರಾನ್ಸ್ ಬಯಸುತ್ತಿದೆ,  ಆದರೆ ರಶ್ಯವನ್ನು ಪುಡಿಮಾಡಬೇಕು ಎಂದು ಯಾವತ್ತೂ ಬಯಸುವುದಿಲ್ಲ. ಉಕ್ರೇನ್ ತನ್ನನ್ನು ರಕ್ಷಿಸಿಕೊಳ್ಳಲು ಸಮರ್ಥವಾಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಶನಿವಾರ ಮಾಕ್ರನ್ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಮರಿಯಾ ಝಕರೋವಾ `ಫ್ರಾನ್ಸ್ ನಿಂದ ಇಂತಹ ಹೇಳಿಕೆ ಮಾಕ್ರನ್ಗಿಂತಲೂ ಮೊದಲು ಕೇಳಿಬಂದಿತ್ತು ಮತ್ತು ಈಗ ನೆಪೊಲಿಯನ್  ಅವರು ಪ್ಯಾರಿಸ್ ನ ಕೇಂದ್ರಸ್ಥಳದಲ್ಲಿ ಚಿರಶಾಂತಿಗೆ ತೆರಳಿದ್ದಾರೆ ಎಂಬುದನ್ನು ಮಾಕ್ರನ್ ಅರ್ಥಮಾಡಿಕೊಳ್ಳಬೇಕು. ಅವರ ಪ್ರತಿಕ್ರಿಯೆ ಗಮನಿಸಿದರೆ ಪಾಶ್ಚಿಮಾತ್ಯರು ರಶ್ಯದಲ್ಲಿ ಅಧಿಕಾರ ಬದಲಾವಣೆಯ ಉದ್ದೇಶ ಹೊಂದಿದ್ದಾರೆ ಎಂಬುದು ನಿಚ್ಚಳವಾಗಿದೆ' ಎಂದು ಹೇಳಿದ್ದಾರೆ.

ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿ ಮಾಕ್ರನ್ ರಶ್ಯ ಪರ ಮೃದುಧೋರಣೆ ಹೊಂದಿದ್ದಾರೆ ಎಂಬ ಅಸಮಾಧಾನ ನೇಟೊದ ಸದಸ್ಯರಲ್ಲಿದೆ. ಅಲ್ಲದೆ, ಪಾಶ್ಚಿಮಾತ್ಯರ ಒಕ್ಕೂಟದಲ್ಲಿ ಫ್ರಾನ್ಸ್ ಅತ್ಯಂತ ದುರ್ಬಲ ಕೊಂಡಿಯಾಗಿದೆ ಎಂಬ ಭಾವನೆಯೂ ಇದೆ. ರಶ್ಯದಲ್ಲಿ ಆಡಳಿತದ ಬದಲಾವಣೆಗೆ ಪ್ರಯತ್ನ ನಡೆಯುತ್ತಿರುವುದು ನಿಜವಾದರೆ ಅದಕ್ಕೆ ನಿಮ್ಮ ಬೆಂಬಲವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದ ಮಾಕ್ರನ್ ` ಈ ಬಗ್ಗೆ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ಆಡಳಿತ ಬದಲಾವಣೆಯ ಬಗ್ಗೆ ಒಂದುಕ್ಷಣವೂ ನಾನು ಯೋಚಿಸುವುದಿಲ್ಲ. ಈ ಬಗ್ಗೆ ಹಲವರು ಮಾತನಾಡುತ್ತಿರುವುದನ್ನು ಗಮನಿಸಿದ್ದೇನೆ. ಯಾವ ಬದಲಾವಣೆ ನೀವು ಬಯಸುತ್ತೀರಿ.. ನಿಮ್ಮ ಮುಖಂಡ ಯಾರು? ಎಂಬ ಪ್ರಶ್ನೆಯನ್ನು ಅವರಿಗೆ ಕೇಳಲು ಬಯಸುತ್ತೇನೆ' ಎಂದಿದ್ದರು.

share
Next Story
X