ಮಡಿಕೇರಿ| ಗುಂಡೇಟಿನಿಂದ ಪುತ್ರ ಸಾವು: ಆರೋಪಿ ತಂದೆಯ ಬಂಧನ

ಮಡಿಕೇರಿ: ವ್ಯಕ್ತಿಯೊಬ್ಬರು ಗುಂಡೇಟಿನಿಂದ ಮೃತಪಟ್ಟ ಘಟನೆ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆಯಿಂದಲೇ ಪುತ್ರನ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಂದೇಟಿರ ನಿರನ್(28) ಎಂಬವರು ಮೃತ ವ್ಯಕ್ತಿಯಾಗಿದ್ದು, ಆರೋಪಿ ತಂದೆ ನಂದೇಟಿರ ಚಿಟ್ಟಿಯಪ್ಪ ಸಾಬು(58) ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂದು ಹೇಳಲಾಗಿದ್ದು, ನಿರನ್ ಟಿವಿ ನೋಡುತ್ತಿದ್ದ ಸಂದರ್ಭ ತಂದೆ ಸಾಬು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Next Story





