ಚಾಮರಾಜನಗರ: ಕೆರೆಗೆ ಬಿದ್ದು ಯುವಕರಿಬ್ಬರು ಮೃತ್ಯು

ಚಾಮರಾಜನಗರ, ಫೆ.20: ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ತೆರಕಣಾಂಬಿ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಕಾರ್ತಿಕ್(30) ಮತ್ತು ವಿನೋದ್(24) ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರಾಗಿರುವ ಇವರಿಬ್ಬರು ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಅಗ್ನಿಶಾಮಕದಳವರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದ್ದು, ಚಾಮರಾಜನಗರ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಡಬ | ಕಾಡಾನೆ ದಾಳಿ: ಯುವತಿ ಸಹಿತ ಇಬ್ಬರು ಮೃತ್ಯು

Next Story







